ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ಅನುಪಮ್ ಖೇರ್ ಎಂಟ್ರಿ ಕೊಟ್ಟಿದ್ದಾರೆ.
ತಮಿಳು, ಇಂಗ್ಲಿಷ್, ಮಲಯಾಳಂ ಮತ್ತು ತೆಲುಗು ಚಲನಚಿತ್ರೋದ್ಯಮಗಳಲ್ಲಿ ಕೆಲಸ ಮಾಡಿರುವ ಅನುಪಮ್, ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಘೋಸ್ಟ್ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.
ಅನುಪಮ್ ಘೋಸ್ಟ್ ಚಿತ್ರದಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಅವರು ಮಾರ್ಚ್ ನಲ್ಲಿ ತಂಡ ಸೇರಿಕೊಳ್ಳಲಿದ್ದಾರೆ. ಅವರ ಪಾತ್ರದ ವಿವರಗಳನ್ನು ಫಸ್ಟ್ ಲುಕ್ ಪೋಸ್ಟರ್ ನೊಂದಿಗೆ ಬಹಿರಂಗಪಡಿಸಲಾಗುವುದು ಎಂದು ತಿಳಿದು ಬಂದಿದೆ.
ಚಿತ್ರದಲ್ಲಿ ವಿಶೇಷ ಪೊಲೀಸ್ ಅಧಿಕಾರಿಯಾಗಿ ಜಯರಾಮ್ ನಟಿಸಲಿದ್ದಾರೆ ಎಂದು ಹೇಳಲಾಗಿದೆ.
ಬೀರಬಲ್ ಹಾಗೂ ಓಲ್ಡ್ ಮಾಂಕ್ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಶ್ರೀನಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿತ್ರದಲ್ಲಿ ನಟಿಸಿದ್ದಾರೆ.
___

Be the first to comment