ಇಂದು ನಟ ಶಿವರಾಮ್ ಅಂತ್ಯಕ್ರಿಯೆ

ಅನಾರೋಗ್ಯದಿಂದ ಗುರುವಾರ ಮೃತಪಟ್ಟ ನಟ, ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್  ಅಂತ್ಯಕ್ರಿಯೆ ಇಂದು ನಡೆಯಲಿದೆ. 

ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ.  ಸ್ಯಾಂಡಲ್ ವುಡ್ ಕಲಾವಿದರು, ಸ್ನೇಹಿತರು ಶಿವರಾಮ್ ಅಂತಿಮ ದರ್ಶನ ಪಡೆಯಲಿದ್ದಾರೆ.  ಬಳಿಕ ಬಿಡದಿ ಸಮೀಪದ ಉರಗಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಭಿಮಾನಿಗಳಿಗೆ, ಆಪ್ತರಿಗೆ ಅಂತಿಮ ದರ್ಶನ ಅವಕಾಶವಿದೆ ಎಂದು ಅಳಿಯ ಪ್ರದೀಪ್‌  ಮಾಹಿತಿ ನೀಡಿದ್ದಾರೆ.

ಗುರುವಾರ ಸಂಜೆ 4.15 ಕ್ಕೆ ಕೆ ಶಿವರಾಮ್ ಮೃತರಾದ ಸುದ್ದಿಯನ್ನು ಅಳಿಯ ಪ್ರದೀಪ್ ತಿಳಿಸಿದ್ದರು.  ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೃದಯಾಘಾತ ಮತ್ತು ಮೆದುಳು ನಿಷ್ಕ್ರಿಯವಾಗಿದ್ದ ಬಗ್ಗೆ ಮಾಹಿತಿ ಕೇಳಿಬಂದಿತ್ತು. ಬಹು ಅಂಗಾಂಗ ವೈಫಲ್ಯಕ್ಕೊಳಗಾದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರ ಮೃತದೇಹವನ್ನು ಮೊದಲು ರಾಜಾಜಿನಗರದ ಅವರ ನಿವಾಸಕ್ಕೆ ಕರೆತರಲಾಯಿತು. ಇಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾಕ್ಷೇತ್ರಕ್ಕೆ ಕರೆತರಲಾಗಿದೆ.

ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಅಧಿಕಾರಿಯಾದ ಹೆಗ್ಗಳಿಕೆ ಕೆ. ಶಿವರಾಮ್ ಅವರದ್ದಾಗಿತ್ತು. ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಶಿವರಾಮ್ ಕೆಲಸ ಮಾಡಿದ್ದರು. ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಭಾರಿಗೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಶಿವರಾಮ್ ಆ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಬಿಜೆಪಿ ಸೇರಿದರು. ಕಳೆದ ಕೆಲವು ವರ್ಷಗಳಿಂದ ಶಿವರಾಮ್ ಬಣ್ಣದ ಬದುಕಿನಿಂದ ದೂರವಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!