ಕನ್ನಡದ ಪೋಷಕ ನಟಿಯ ಕೊಲೆ

‘ಭಜರಂಗಿ’,  ‘ವೇದ’, ‘ಜೈ ಮಾರುತಿ 800’, ‘ಅಜಿತ್’ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದ ನಟಿ ವಿದ್ಯಾ ಪತಿಯಿಂದಲೇ  ಕೊಲೆಯಾಗಿದ್ದಾರೆ.

ಕೊಲೆ ಮಾಡಿದ್ದಾನೆ ಎನ್ನಲಾಗಿರುವ ಪತಿ ನಂದೀಶ್ ನಾಪತ್ತೆಯಾಗಿದ್ದಾನೆ.  ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿದ್ಯಾ ನಟನೆಯ ಜೊತೆಗೆ ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದರು. ಮೈಸೂರು ನಗರ ಕಾಂಗ್ರೆಸ್​ನ ಕಾರ್ಯದರ್ಶಿಯಾಗಿ ವಿದ್ಯಾ ಕೆಲಸ ಮಾಡುತ್ತಿದ್ದರು.

2018ರಲ್ಲಿ ವಿದ್ಯಾ, ನಂದೀಶ್ ಎಂಬುವರೊಟ್ಟಿಗೆ ವಿವಾಹವಾಗಿದ್ದರು. ಕೆಲ ದಿನಗಳ ಬಳಿಕ ಇಬ್ಬರ ನಡುವೆ ಮನಸ್ತಾಪ ಏರ್ಪಟ್ಟಿತ್ತು. ವಿಚ್ಛೇದನಕ್ಕೂ ಇವರು ಪ್ರಯತ್ನಿಸಿದ್ದರು. ಆದರೆ ಪೋಷಕರು ಬುದ್ಧಿವಾದ ಹೇಳಿ ಇಬ್ಬರನ್ನೂ ಒಂದು ಮಾಡಿದ್ದರು. ಆದರೆ ಜಗಳ ಮುಂದುವರೆದಿತ್ತು. ಇತ್ತೀಚೆಗೆ ಇಬ್ಬರ ನಡುವೆ ಜಗಳ ನಡೆದಿತ್ತು. ಆಗ ವಿದ್ಯಾ ಗಂಡನ ಮನೆ ಮೈಸೂರಿನ ತುರಗನೂರಿನಿಂದ, ತವರು ಮನೆಯಾದ  ಶ್ರೀರಾಮಪುರಕ್ಕೆ ಬಂದಿದ್ದರು.

ಮೇ 20 ರಂದು  ನಂದೀಶ್ ಹಾಗೂ ವಿದ್ಯಾ ನಡುವೆ ಫೋನ್​ನಲ್ಲಿ ಜಗಳ ನಡೆದಿತ್ತು. ಜಗಳ ತಾರಕಕ್ಕೆ ಹೋಗಿ ವಿದ್ಯಾ ರಾತ್ರೋರಾತ್ರಿ ಶ್ರೀರಾಮಪುರದಿಂದ ಹೊರಟು ತುರುಗನೂರಿಗೆ ತಲುಪಿ ಗಂಡನೊಟ್ಟಿಗೆ ಜಗಳಕ್ಕೆ ನಿಂತಿದ್ದರು. ಜಗಳ ತಾರಕಕ್ಕೆ ಹೋದಾಗ ಪತಿ ನಂದೀಶ್, ಸುತ್ತಿಗೆಯಿಂದ ವಿದ್ಯಾ ಮೇಲೆ ಹಲ್ಲೆ ಮಾಡಿದ್ದಾರೆ. ಹೊಡೆತದ ರಭಸಕ್ಕೆ ವಿದ್ಯಾ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದು, ನಂದೀಶ್ ಅಲ್ಲಿಂದ ಪರಾರಿಯಾಗಿದ್ದಾನೆ.

ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಬನ್ನೂರು ಠಾಣೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ಮಹಜರು ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿ ನಂದೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!