ಹಿರಿಯ ನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅಡವಿಕಟ್ಟೆ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ಉಮ ಎಸ್. ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ “ಅಡವಿಕಟ್ಟೆ” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನಪ್ರಿಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರರ್ ಜಾನರ್ನ ಈ ಚಿತ್ರಕ್ಕೆ ಎಸ್.ಎನ್. ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ, ಸಂಜೀವ್ ಅವರ ಸಾಹಸ ನಿರ್ದೇಶನ ಇದೆ.
“ಅಡವಿಕಟ್ಟೆ” ಚಿತ್ರದಲ್ಲಿ ಅಭಿಜಿತ್, ನಾಗರಾಜು, ಶಾಂತಿ, ಯಶ್ ಶಂಕರ್, ಅನುಪ್ರೇಮ, ರವಿಚಂದ್ರನ್ ಆರ್, ಮಂಜುಳಾ ರೆಡ್ಡಿ ಅಭಿನಯಿಸಿದ್ದಾರೆ. ಗೋಕಾಕ್ ನಗರದ ಸುತ್ತಮುತ್ತ ಚಿತ್ರದ ಹೆಚ್ಚಿನ ಚಿತ್ರೀಕರಣ ನಡೆದಿದೆ.
“ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರರ್ ಜಾನರ್ ಹೊಂದಿರುವ ಚಿತ್ರ. ಕನ್ನಡದಲ್ಲಿ ಈ ಜಾನರ್ನಲ್ಲಿ ಸಾಕಷ್ಟು ಚಿತ್ರಗಳು ಬಂದಿದೆಯಾದರೂ ಇದು ವಿಭಿನ್ನ. ಚಿತ್ರದ ಹೆಸರೇ ಹೇಳುವಂತೆ ಇದೊಂದು ಅಡವಿ ಅಂದರೆ ಕಾಡಿನಲ್ಲಿ ನಡೆಯುವ ಕಥೆ ಹೊಂದಿದೆ” ಎಂದು ನಿರ್ದೇಶಕ ಸಂಜೀವ್ ಗಾವಂಡಿ ತಿಳಿಸಿದ್ದಾರೆ.
—-

Be the first to comment