ನಟಿ ಅದಿತಿ ಬಾಲನ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡಕ್ಕೆ ಎಂಟ್ರಿ ನೀಡಿದ್ದು, ಏಜೆಂಟ್ ಕಾವೇರಿ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ.
ತಮಿಳುನಾಡಿನ ರಾಜ್ಯ ಪ್ರಶಸ್ತಿ ಪಡೆದಿರುವ ಅದಿತಿ ಬಾಲನ್ ಅವರು ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದಿತಿ ಈ ಸಿನಿಮಾದಲ್ಲಿ ನಟಿಸಿರುವುದರಿಂದ ನಿರೀಕ್ಷೆ ಮೂಡಿದೆ. ‘ಅರುವಿ’ ಸಿನಿಮಾದ ಮೂಲಕ ಅದಿತಿ ಗಮನ ಸೆಳೆದಿದ್ದರು. ಅವರು ‘ಕ್ಯಾಪ್ಟನ್ ಮಿಲ್ಲರ್’, ‘ಪಡವೆಟ್ಟು’ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಏಜೆಂಟ್ ಪ್ರಕಾಶ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ ಅವರು ಏಜೆಂಟ್ ಶಂಕರ್ ಆಗಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ಅವರು ‘ವೈಶಾಖ್ ಜೆ. ಫಿಲ್ಮ್ಸ್’ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ಸಿನಿಮಾಗೆ ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಸಿನಿಮಾ ಐದನೇ ಹಂತದ ಚಿತ್ರೀಕರಣ ಮಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಡುತ್ತಿದೆ.
—–





Be the first to comment