“ಹೊಸತರ” ಮೂಲಕ ಹೊಸ ನಿರ್ದೇಶಕನ ಎಂಟ್ರಿ !

ಪತ್ರಕರ್ತ, ನಟ, ಕಾರ್ಯಕಾರಿ ನಿರ್ಮಾಪಕರಾಗಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ.

ಕಥೆ, ಚಿತ್ರಕಥೆ ಕೂಡ ಅಫ್ಜಲ್  ಬರೆದಿದ್ದಾರೆ. ಇತ್ತೀಚಿಗೆ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, “ಹೊಸತರ” ಎಂದು ಹೆಸರಿಡಲಾಗಿದೆ.

ಹೆಸರಾಂತ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗುತ್ತಿದ್ದು, ಉತ್ತಮ ಗುಣಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ತಾರಾಬಳಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ಅಫ್ಜಲ್ ತಿಳಿಸಿದ್ದಾರೆ.

ಜೈವಿಜಯ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಹೊಸತರ” ಚಿತ್ರದಲ್ಲಿ  ಲವ್, ಸಸ್ಪೆನ್ಸ್, ಥ್ರಿಲ್ಲರ್  ಅಂಶಗಳು ಇದೆ. ಕಾಮಿಡಿ  ಹೆಚ್ಚಾಗಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರದಲ್ಲಿ ಮೂರು ಹಾಡುಗಳು ಹಾಗೂ ಎರಡು ಸಾಹಸ ಸನ್ನಿವೇಶಗಳಿದೆ.

ರಾಜು ಎಮ್ಮಿಗನೂರು ಸಂಗೀತ ನಿರ್ದೇಶನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ ಮಾಡಲಿದ್ದಾರೆ. ರಾಜೀವ್ ಗನೇಸನ್ ಛಾಯಾಗ್ರಹಣ, ಆಂಥೋನಿ ಪಯಾನೋ(ಕೆನಡಾ) ಹಿನ್ನೆಲೆ ಸಂಗೀತ,  ಬಾಬು ಶಿವಪುರ  ಸಂಕಲನವಿದೆ. ಚಿತ್ರಕ್ಕೆ ಅಮೇರಿಕಾದ ಜೆ ಹೆಚ್ ಜೆ ಸ್ಟುಡಿಯೋ ವಿ ಎಫ್ ಎಕ್ಸ್ ಮಾಡಲಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!