ಬಾಲಿವುಡ್ ನಟಿ ಐಶ್ವರ್ಯ ರೈ ಮತ್ತೊಂದು ತಮಿಳು ಚಿತ್ರ ಒಪ್ಪಿಕೊಂಡಿದ್ದಾರೆ.
ಅಜಿತ್ ಕುಮಾರ್ ಈ ಸಿನಿಮಾದ ನಾಯಕ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಐಶ್ವರ್ಯ ರೈ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಚಿತ್ರಕ್ಕೆ ನಯನತಾರಾ ಪತಿ ವಿಘ್ನೇಶ್ ಶಿವನ್ ನಿರ್ದೇಶಕ ಆಗಿದ್ದಾರೆ.
ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು ಲೈಕಾ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಚಿತ್ರ ಮೂಡಿ ಬರಲಿದೆ. ಈ ಚಿತ್ರದಲ್ಲಿ ಅಜಿತ್ ಹೊಸ ಬಗೆಯ ರಗಡ್ ಲುಕ್ ಇರುವ ಪಾತ್ರವನ್ನು ಮಾಡಲಿದ್ದಾರೆ ಎಂದು ಸುದ್ದಿ ಆಗಿದೆ. ಇದು ಅಜಿತ್ ಅವರ 62ನೇ ಸಿನಿಮಾವಾಗಿದೆ.
ಐಶ್ವರ್ಯ ರೈ ಹಿಂದಿಯ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳದೇ ಇದ್ದರೂ, ದಕ್ಷಿಣದ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ನಟಿಸಿದ್ದರು.
ಸಿನಿಮಾಗಳ ಆಯ್ಕೆಯ ವಿಷಯದಲ್ಲಿ ನಾನು ತುಂಬಾ ಚ್ಯೂಸಿಯಾಗಿದ್ದೇನೆ. ಎಲ್ಲ ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಐಶ್ವರ್ಯ ಹಲವಾರು ಬಾರಿ ಹೇಳಿದ್ದರು.
___

Be the first to comment