Ajagrata: ರಾಧಿಕಾ ಕುಮಾರಸ್ವಾಮಿ ಚಿತ್ರದ ಶೂಟಿಂಗ್ ಆರಂಭ

ರಾಧಿಕಾ ಕುಮಾರಸ್ವಾಮಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರದ ಶೂಟಿಂಗ್ ಆರಂಭ ಆಗಿದೆ.

ತೆಲುಗು ಚಿತ್ರರಂಗದ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರವನ್ನು ರವಿರಾಜ್ ನಿರ್ಮಿಸುತ್ತಿದ್ದು, ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ. ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ ಆಗಿದೆ.

ಚಿತ್ರಕ್ಕೆ ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಇದೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!