Ajay rao: ಅಜಯ್ ರಾವ್ ಗೆ ನಾಯಕಿಯಾದ ಅರ್ಚನಾ ಜೋಯಿಸ್

ಅಜಯ್ ರಾವ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಅರ್ಚನಾ ಜೋಯಿಸ್ ನಾಯಕಿಯಾಗಿ ನಟಿಸಲಿದ್ದಾರೆ.

ಚಿತ್ರಕ್ಕೆ ಯುದ್ಧಕಾಂಡ ಎಂದು ಟೈಟಲ್ ಇಡಲಾಗಿದೆ. ಅಜಯ್ ರಾವ್ ತಮ್ಮ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

‘ಯುದ್ಧಕಾಂಡ’ ಎಂದಾಗ ನೆನಪಾಗೋದು ಲೆಜೆಂಡರಿ ರವಿ ಸರ್ ಸಿನಿಮಾ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆಗ ಬಂದ ‘ಯುದ್ಧಕಾಂಡ’ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಅಜಯ್ ರಾವ್ ಹೇಳಿದ್ದಾರೆ.

ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕ ಆದ ಅಜಯ್‌ ರಾವ್‌ ಅವರು ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೇ ಶೇಕಡಾ 50 ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದೆ. ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಈ ಚಿತ್ರವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ.
——–

Be the first to comment

Leave a Reply

Your email address will not be published. Required fields are marked *

Translate »
error: Content is protected !!