ಎಲ್ಲಿಗೆ ಪಯಣ ಯಾವುದೋ ದಾರಿ

ಅ.25 ರಂದು ‘ಎಲ್ಲಿಗೆ ಪಯಣ ಯಾವುದೋ ದಾರಿ’ ಬಿಡುಗಡೆ

ಕಾಶಿನಾಥ್ ಪುತ್ರ ಅಭಿಮನ್ಯು ಕಾಶಿನಾಥ್ ಮುಖ್ಯ ಭೂಮಿಕೆಯ  ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಅಕ್ಟೋಬರ್ 25 ರಂದು ಬಿಡುಗಡೆಯಾಗಲಿದೆ.

ಸುದರ್ಶನ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜತಿನ್ ಪಟೇಲ್ ನಿರ್ಮಿಸಿದ  ಚಿತ್ರವನ್ನು ಕಿರಣ್ ಎಸ್ ಸೂರ್ಯ ನಿರ್ದೇಶಿಸಿದ್ದಾರೆ, ಕಿರಣ್ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಲವ್‌ ಕಂ ಥ್ರಿಲ್ಲರ್‌ ಜಾನರಿನ ಚಿತ್ರ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಕೊಲೆಯೊಂದರ ಸುತ್ತ  ಜರುಗುತ್ತದೆ.  ಕಿರಣ್‌ ಅವರ ಈ ಹೊಸ ಪ್ರಯತ್ನ ಸಾಂಪ್ರದಾಯಿಕ ಗಡಿಗಳನ್ನು ಧಿಕ್ಕರಿಸುವ ಗುರಿಯನ್ನು ಹೊಂದಿದೆ. ಲವ್ ಕಂ ಥ್ರಿಲ್ಲರ್ ಆಗಿರುವ ಈ ಚಿತ್ರ ವೀಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುವ ಭರವಸೆ ಇದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ವಿಜಯಶ್ರೀ ಕಲಬುರ್ಗಿ ಬಲ ರಾಜವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನಿ ರಾವ್, ಪ್ರಿಯಾ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪ್ರಣವ್ ರಾವ್ ಸಂಗೀತ ನಿರ್ದೇಶನ, ಸತ್ಯ ರಾಮ್ ಛಾಯಾಗ್ರಹಣ, ಪ್ರಮೋದ್ ಮರವಂತೆ ಸಾಹಿತ್ಯವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!