ಶಿವ ಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಅಮರನ್’ ಅ.31ರಂದು ಕನ್ನಡದಲ್ಲೂ ತೆರೆ ಕಾಣುತ್ತಿದೆ.
ಹುತಾತ್ಮ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿರುವ ‘ಅಮರನ್’ ಸಿನಿಮಾ ಕನ್ನಡದಲ್ಲಿ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಶಿವ ಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಹಾಗೂ ಸಾಯಿ ಪಲ್ಲವಿ ಮುಕುಂದ್ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ.
ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರ ‘ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್’ ಪುಸ್ತಕದ ಅಂಶಗಳನ್ನು ತೆಗೆದುಕೊಂಡು ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದಿದ್ದಾರೆ. ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಛಾಯಾಗ್ರಹಣ ಮತ್ತು ಆರ್. ಕಲೈವನನ್ ಸಂಕಲನ ಚಿತ್ರಕ್ಕಿದೆ.
ಕಮಲ್ ಹಾಸನ್ ಅವರ ರಾಜ್‌ಕಮಲ್ ಫಿಲ್ಮ್ಸ್‌ಇಂಟರ್‌ನ್ಯಾಷನಲ್, ಸೋನಿ ಪಿಕ್ಚರ್ಸ್ ಜಂಟಿಯಾಗಿ ‘ಅಮರನ್’ ಸಿನಿಮಾ ನಿರ್ಮಾಣ ಮಾಡಿದೆ. ಈಗಾಗಲೇ ಕನ್ನಡದಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
Be the first to comment