ಸೆ.18 ರಂದು ‘ಅಮರ್ಥ’ ಬಿಡುಗಡೆ

ಶ್ರೀನಗರ ಕಿಟ್ಟಿ – ಮೇಘನಾರಾಜ್ ನಾಯಕ,  ನಾಯಕಿಯಾಗಿ ನಟಿಸಿರುವ ‘ಅಮರ್ಥ’ ಚಿತ್ರ ಸೆಪ್ಟೆಂಬರ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಸಿರುವ, ಗುರು ಹೆಗ್ಡೆ ಹಾಗೂ ವಿನಯ್ ಪ್ರೀತಮ್ ನಿರ್ದೇಶನದ ಚಿತ್ರದ ಬಿಡುಗಡೆ ದಿನಾಂಕವುಳ್ಳ ಮೋಷನ್ ಪೋಸ್ಟರ್  ನ್ನು ಹಿರಿಯ ನಟ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಸುಂದರರಾಜ್ ಅವರು  ಅನಾವರಣ ಮಾಡಿದರು.

‘ಈ ಚಿತ್ರ ಆರಂಭವಾಗಿ ಎರಡು ವರ್ಷಗಳಾಗಿದೆ. ಈಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಸೆನ್ಸಾರ್ ಮಂಡಳಿ   ಯು/ಎ ಪ್ರಮಾಣಪತ್ರ ನೀಡಿದೆ. ಸೆಪ್ಟೆಂಬರ್ 18 ರಂದು ಚಿತ್ರ ಬಿಡುಗಡೆಯಾಗಲಿದೆ. ‘ಅಮರ್ಥ’ ಎಂದರೆ ನಮ್ಮೆಲ್ಲರನ್ನು ಮೀರಿದ ಒಂದು ಶಕ್ತಿ ಎನ್ನಬಹುದು. ನಾವು ಸಾಮಾನ್ಯವಾಗಿ ಯಾವುದೇ ನಮ್ಮ ಜೀವನದಲ್ಲಿ ಏನೇ ನಡೆದರೂ ದೇವರ ದಯೆ, ಹಣೆಬರಹ, ಗ್ರಹಾಚಾರ ಅಂತೆಲಾ ಅಂದುಕೊಳ್ಳುತ್ತೇವೆ.   ಆದರೆ ಅದಕ್ಕೂ ಮೀರಿದ ಶಕ್ತಿಯೊಂದಿದೆ. ಅದೇ ‘ಅಮರ್ಥ’ ಎಂದು ಶೀರ್ಷಿಕೆಯ ಬಗ್ಗೆ  ನಿರ್ಮಾಪಕ, ನಿರ್ದೇಶಕ ಹಾಗೂ ನಟ ಗುರು ಹೆಗ್ಡೆ  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘”ಮಡಮಕ್ಕಿ”, ” ನಾನು ಅದು ಮತ್ತು ಸರೋಜ” ಚಿತ್ರಗಳ ನಂತರ ಈ ಚಿತ್ರವನ್ನು ಗುರು ಹೆಗ್ಡೆ ಅವರ ಜೊತೆಯಾಗಿ ನಿರ್ದೇಶಿಸಿದ್ದೇನೆ.  ಇದೊಂದು ವಿಭಿನ್ನ ಕಥೆ‌. ಶ್ರೀನಗರ ಕಿಟ್ಟಿ, ಮೇಘನಾರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ‌‌. ಕೃತಿ ಶೆಟ್ಟಿ, ಉಷಾ ಭಂಡಾರಿ, ಮಂಜು ಭಾಷಿಣಿ, ಗುರು ಹೆಗ್ಡೆ, ತಮ್ಮಣ್ಣ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಶಿನಾಯ್ ವಿ ಜೋಸೆಫ್, ಪಂಚಮ್ ಜೀವ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್, ಬಲರಾಮ್ ಹಾಗೂ ರಾಕೇಶ್ ಆಚಾರ್ ಹಿನ್ನೆಲೆ ಸಂಗೀತ ನೀಡಿದ್ದಾರೆ’ ಎಂದರು ನಿರ್ದೇಶಕ ವಿನಯ್ ಪ್ರೀತಮ್.

‘ ಇದು “ಅಮರ್ಥ” ಚಿತ್ರದ ಮೊದಲ ಪತ್ರಿಕಾಗೋಷ್ಠಿ. ನಾನು ಹಾಗೂ ಮೇಘನಾರಾಜ್ ಒಟ್ಟಾಗಿ ನಟಿಸಿರುವ ಮೂರನೇ ಚಿತ್ರ. ಬಾಲ್ಯದಿಂದ ಒಬ್ಬ ಹುಡುಗನ ಜರ್ನಿ ಹೇಗಿರುತ್ತದೆ ಎಂಬುದರ ಸುತ್ತ ಕಥೆ ಸಾಗುತ್ತದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮಂಗಳೂರು, ಬೆಂಗಳೂರಿನಲ್ಲಿ 48 ದಿನಗಳ ಕಾಲ ಚಿತ್ರೀಕರಣ ನಡೆದಿದೆ’ ಎಂದು ಶ್ರೀನಗರ ಕಿಟ್ಟಿ ಹೇಳಿದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!