ಕೊರೊನಾ ಸೋಂಕಿತರಿಗಾಗಿ ಐರಾವನ್ ತಂಡದಿಂದ ಆಕ್ಸಿಜನ್ ಆಂಬ್ಯುಲೆನ್ಸ್ ಸೇವೆ ಆರಂಭ

ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಸಹಯೋಗದಲ್ಲಿ ಐರಾವನ್ ಚಿತ್ರತಂಡ ಇದೀಗ ಕೊರೊನಾ ಸೋಂಕಿತರ ಸೇವೆಗೆ ಇಳಿದಿದ್ದು, ಚಿತ್ರದ ನಿರ್ಮಾಪಕ ಡಾ. ನಿರಂತರ್ ಗಣೇಶ್ ಮತ್ತು ಚಿತ್ರ ನಾಯಕ ಜಯರಾಮ್ ಕಾರ್ತಿಕ್ (ಜೆಕೆ) ಮತ್ತು ನಟ ವಿವೇಕ್ ಆಕ್ಸಿಜನ್​ ಆಂಬ್ಯುಲೆನ್ಸ್ ಅನ್ನು ಭಾನುವಾರ ಬ್ಯಾಟರಾಯನಪುರ ವ್ಯಾಪ್ತಿಗೆ ನೀಡಿದ್ದಾರೆ.

ಆಂಬ್ಯುಲೆನ್ಸ್ ಜೊತೆಗೆ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್, ಒಂದಷ್ಟು ಔಷಧಗಳನ್ನೂ ವಿತರಣೆ ಮಾಡಿದ್ದಾರೆ. ಈ ಕಾರ್ಯಕ್ಕೆ ಆರ್ ಎಸ್ ಎಸ್ ನ ಪ್ರಾದೇಶಿಕ ಜನರಲ್ ಸೆಕ್ರೇಟರಿ ಎನ್ ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯದ ಆರೋಗ್ಯ ಭಾರತಿಯ ಜಂಟಿ ಕಾರ್ಯದರ್ಶಿ ಗಂಗಾಧರನ್ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ನಿರ್ಮಾಪಕ ನಿರಂತರ್, ಇಂಥ ವಿಷಮ ಕಾಲಘಟ್ಟದಲ್ಲಿ ಸಮಾಜಕ್ಕೆ ನಾವು ಮಾಡಬೇಕಾದ ಜವಾಬ್ದಾರಿ ಇದು. ಎಲ್ಲೆಡೆ ಆಂಬ್ಯುಲೆನ್ಸ್ ಕೊರತೆ ಕಾಡುತ್ತಿದೆ. ಅದನ್ನೇ ಗಮನದಲ್ಲಿಟ್ಟುಕೊಂಡು ಬ್ಯಾಟರಾಯನಪುರ ವ್ಯಾಪ್ತಿಗೆ ಆಕ್ಸಿಜನ್ ಸಹಿತ ಆಂಬ್ಯುಲೆನ್ಸ್ ನೀಡಿದ್ದೇವೆ. ಇದರ ಜತೆಗೆ ಕೋವಿಡ್ ಮೆಡಿಕಲ್ ಕಿಟ್ ಅನ್ನೂ ವಿತರಣೆ ಮಾಡಿದ್ದೇವೆ. ಸೋಂಕಿನ ಲಕ್ಷಣ ಕಾಣುತ್ತಿದ್ದಂತೆ ಕಿಟ್​ನಲ್ಲಿ ನೀಡಿದ ಔಷಧಗಳನ್ನು ತೆಗೆದುಕೊಳ್ಳಬಹುದು. ಯಾವ್ಯಾವುದನ್ನು ಹೇಗೆ ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನೂ ನೀಡಿದ್ದೇವೆ ಎಂದಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!