ಅಮ್ಮು ಸಿನಿಮಾ

‘ಅಮ್ಮು’ ಟೈಟಲ್ ಅನಾವರಣ

ಸೂಪರ್ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾದ ಟೈಟಲ್ ಬಿಡುಗಡೆ ಮಾಡಲಾಗಿದೆ.

ಪುದುಚೇರಿಯಲ್ಲಿ 82 ಅಡಿ ಸಮುದ್ರದಾಳಕ್ಕಿಳಿದು ಚಿತ್ರತಂಡ ‘ಅಮ್ಮು’ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ದುನಿಯಾ ವಿಜಯ್, ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು.

ಮಹೇಶ್ ಬಾಬು ಈ ಸಿನಿಮಾ ಮೂಲಕ ‘ಕನ್ನಡತಿ’, ‘ಅವನು ಮತ್ತೆ ಶ್ರಾವಣಿ 2’ ದಂತಹ ಧಾರಾವಾಹಿಗಳಲ್ಲಿ ನಟಿಸಿದ್ದ ‘ಸ್ಮೈಲ್ ಗುರು’ ರಕ್ಷಿತ್ ಅವರನ್ನು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ.

ನಿರ್ದೇಶಕ  ಮಹೇಶ್ ಬಾಬು ಮಾತನಾಡಿ, ವಜ್ರೇಶ್ವರಿ ಕಂಬೈನ್ಸ್ ಮೂಲಕ ನನ್ನ ನಿರ್ದೇಶಕರಾಗಿ ಪರಿಚಯಿಸಿದವರು ಪಾರ್ವತಮ್ಮ, ರಾಜ್ ಕುಮಾರ್  ಹಾಗೂ ಅವರ ಕುಟುಂಬ.  ಅನುರಾಗ್, ಮಿಥುನ್ ಹಾಗೂ ಬಚ್ಚನ್ ಚೇತು ಸಿನಿಮಾ ಮಾಡಬೇಕು ಎಂದರು. ಈ ಚಿತ್ರ ಆಗಲು ಮುಖ್ಯ ಕಾರಣ ರಕ್ಷಿತ್. ಅವರು ಕಥೆ ಮಾಡಿ ನನ್ನ ಬಳಿ ಹೇಳಿದರು.  ಈ ಚಿತ್ರಕ್ಕೆ  ವರ್ಕ್ ಶಾಪ್ ಮಾಡಿದೆ. ಜೆರುಷಾ, ಅಮೃತಾ ಇಬ್ಬರು ಚೆನ್ನಾಗಿ ಆಕ್ಟ್ ಮಾಡುತ್ತಾರೆ. ರಕ್ಷಿತ್ ಒಳ್ಳೆ ನಟ ಎಂದರು.

ಅಮ್ಮು ಸಿನಿಮಾ

ದುನಿಯಾ ವಿಜಯ್ ಮಾತನಾಡಿ, ನಮ್ಮ ಮಕ್ಕಳಿಗೆ ಒಳ್ಳೆದಾಗಲಿ ಎಂದು ನಾನು, ಪ್ರೇಮ್ ಸಿನಿಮಾ ಆಳಕ್ಕೆ ಇಳಿದಿದ್ದೇವೆ. ನಮಗೆ ಸಿನಿಮಾ ಬಿಟ್ಟರೆ ಬೇರೆ ಗೊತ್ತಿಲ್ಲ. ನಿಮ್ಮೆಲ್ಲರ ಆಶೀರ್ವಾದ , ಎಲ್ಲಾ ಹೀರೋ ಅಭಿಮಾನಿಗಳ ಆಶೀರ್ವಾದ ಈ ಮಕ್ಕಳ ಮೇಲೆ ಇರಲಿ. ಇಡೀ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಅಮ್ಮು ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಟಗರು ಪಲ್ಯ ಖ್ಯಾತಿಯ ಅಮೃತಾ ಪ್ರೇಮ್,  ವೀರಮದಕರಿ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಸಾಥ್ ಕೊಡುತ್ತಿದ್ದಾರೆ. ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್  ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್, ಮಿಥುನ್ ಕೆ.ಎಸ್  ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ  ಛಾಯಾಗ್ರಹಣ,  ಸತೀಶ್ ಚಂದ್ರಯ್ಯ  ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!