ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರದ ನಾಯಕಿಯಾಗಿ ತೆಲುಗಿನ “ಹನುಮಾನ್” ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ.
ಗೀತರಚನೆಕಾರ ಹಾಗೂ ”ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
SNT ಎಂಟರ್ಪ್ರೈಸಸ್ ಲಾಂಛನದಲ್ಲಿ ರವಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಅರಸು ಅಂತಾರೆ ಚಿತ್ರಕಥೆಗೆ ಸಂಭಾಷಣೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್, ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿದೆ. ರಮೇಶ್ ಅವರ ನಿರ್ಮಾಣ ನಿರ್ವಹಣೆ ಇದೆ.
ಏಪ್ರಿಲ್ 6 ರಂದು ಚಿತ್ರದ ಮುಹೂರ್ತ ನಡೆಯಲಿದೆ. ಏಪ್ರಿಲ್ 7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ.
