“ಅನಘ” ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಉಪೇಂದ್ರ

ದೀಕ್ಷಾ ಫಿಲಂಸ್ ಸಮೂಹ ಸಿನಿಮಾ ಬ್ಯಾನರ್ ಅಡಿಯಲ್ಲಿ ಡಿ.ಪಿ.ಮಂಜುಳಾ ನಾಯಕ ಅವರು ನಿರ್ಮಿಸಿರುವ ಅನಘ ಚಿತ್ರ ಬಿಡುಗಡೆಗೆ ಇದೀಗ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಟ್ರೈಲರನ್ನು ರಿಯಲ್‌ಸ್ಟಾರ್ ಉಪೇಂದ್ರ ಅವರು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಮೂಲಕ ನಿರ್ದೇಶಕ ರಾಜು ಎನ್.ಆರ್. ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ಹಾಕಿದ್ದು, ಕಥೆ ಚಿತ್ರಕಥೆ, ಸಂಭಷಣೆಯನ್ನು ಅವರೇ ಬರೆದಿದ್ದಾರೆ.

ನಿರ್ಮಾಪಕರು ಬಹುತೇಕ ಹೊಸ ಪ್ರತಿಭೆಗಳನ್ನೇ ಬಳಸಿಕೊಂಡು ಒಂದು ಸಸ್ಪೆನ್ಸ್, ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಅನಘ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಅಣಿಯಾಗಿದ್ದಾರೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಮುಗಿಸಿರುವ ಚಿತ್ರತಂಡ ಸಿನಿಮಾದ ಪ್ರಮೋಷನ್ ಮತ್ತು ರಿಲೀಸ್ ತಯಾರಿಯಲ್ಲಿದೆ.

ರಂಗಭೂಮಿ ಪ್ರತಿಭೆಗಳಾದ ನಳೀನ್‌ಕುಮಾರ್ ಮತ್ತು ಪವನ್‌ಪುತ್ರ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,
ಪೋಷಕ ಪಾತ್ರದಲ್ಲಿ ಸಿಲ್ಲಿಲಲ್ಲಿ ಖ್ಯಾತಿಯ ಶ್ರೀನಿವಾಸ್‌ಗೌಡ್ರು, ಕಿರಣತೇಜ, ಕಿರಣ್‌ರಾಜ್, ಕರಣ್‌ ಆರ್ಯನ್, ದೀಪ, ರೋಹಿತ್, ಖುಷಿ, ರಶ್ಮಿ ಹಾಗೂ ವಿಶೇಷ ಪಾತ್ರದಲ್ಲಿ ನಂಜಪ್ಪ ಬೆನಕ ರಂಗಭೂಮಿ ಮತ್ತು ಹಾಸ್ಯಪಾತ್ರದಲ್ಲಿ ಮೋಟುರವಿ, ಅಭಿ ಮತ್ತು ವಿರೇಶ(ಕೆಜಿಎಫ್) ಕಾಣಿಸಿಕೊಂಡಿದ್ದಾರೆ.

ಇನ್ನು ಈ ಚಿತ್ರಕ್ಕೆ ಬೆಂಗಳೂರು ಹಾಗೂ ದೇವರಾಯನದುರ್ಗದ  ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಸಿನೆಮಾಕ್ಕೆ ಶಂಕರ್ ಅವರ  ಕ್ಯಾಮೆರಾ ಕೈಚಳಕ ಇದ್ದು, ಅವಿನಾಶ್ ಸಂಗೀತ ನೀಡಿದ್ದಾರೆ, ಸಂಕಲನ ವೆಂಕಿ ಯುಡಿವಿ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!