ಅಂದವಾದ ಈ ವಾರ ಬಿಡುಗಡೆ

ಮಧುಶ್ರೀ ಗೋಲ್ಡ್ ಫ್ರೇಮ್ಸ್ ಲಾಂಛನದಲ್ಲಿ ಡಿ.ಆರ್. ಮಧು ಜಿ ರಾಜ್ ನಿರ್ಮಿಸಿರುವ ಅಂದವಾದ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಳೆಗಾಲದಲ್ಲಿ ನಡೆಯುವ ಕ್ಯೂಟ್ ಲವ್ ಸ್ಟೋರಿ ಜೊತೆ ಒಂದೊಳ್ಳೆ ಮೆಸೇಜ್ ಕೊಡುವ, ಕಾಡುವ ಕಥೆ ಈ ಚಿತ್ರದಲ್ಲಿದೆ. ಸಿನಿಮಾ ಪೂರ್ತಿ ನಗಿಸುತ್ತಲೇ, ಕೊನೆಗೆ ನೋಡುಗರ ಕಣ್ಣು ತೇವಗೊಳಿಸಬಲ್ಲ ಗಂಭೀರ ಕಥಾ ವಸ್ತು ಕೂಡಾ ಇದರಲ್ಲಿದೆ. ಈ ಚಿತ್ರಕ್ಕೆ ಚಲ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ವಿಕ್ರಮ್ ವರ್ಮನ್ ಸಂಗೀತ, ಗುರುಕಿರಣ್ ಹಿನ್ನೆಲೆ ಸಂಗೀತ, ಹರೀಶ್ ಎನ್. ಸೊಂಡೇಕೊಪ್ಪ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ, ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಹೃದಯ ಶಿವ ಗೀತ ಸಾಹಿತ್ಯವಿದೆ. ಜೈ, ಅನುಷಾ ರಂಗನಾಥ್, ಹರೀಶ್ ರೈ, ಕೆ.ಎಸ್. ಶ್ರೀಧರ್, ಕೆ.ವಿ. ಮಂಜಯ್ಯ, ರೇಖಾ ಸಾಗರ್, ರೋಜಾ ಮುಂತಾದವರ ತಾರಾಬಳಗವಿದೆ.

This Article Has 1 Comment
  1. Pingback: ثبت نام در بت فوروارد

Leave a Reply

Your email address will not be published. Required fields are marked *

Translate »
error: Content is protected !!