‘ಅಣ್ಣ from Mexico’ ಟೀಸರ್ ಬಿಡುಗಡೆ

ಐರಾ ಫಿಲ್ಮ್ ವತಿಯಿಂದ ನಿರ್ಮಿಸಲಾಗಿರುವ ಚೊಚ್ಚಲ ಚಿತ್ರ ‘ಅಣ್ಣ from Mexico’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಸರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಬಳಿಕ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕನ್ನಡ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಮುಂದಿನ ‌ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದರು.

ಸಿನಿಮಾ ಹೊಸತನದಿಂದ‌ ಕೂಡಿದೆ. ಕನ್ನಡ ಚಿತ್ರರಂಗಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕನ್ನಡ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇವೆ. ಮುಂದಿನ ದಿನಗಳಲ್ಲಿ ಸದಭಿರುಚಿಯ ಸಾಮಾಜಿಕ, ‌ಕೌಟುಂಬಿಕ ಹಿನ್ನೆಲೆ ಹೊಂದಿರುವ ಚಿತ್ರಗಳನ್ನು ‌ನಿರ್ಮಿಸುವ ಆಸೆ ಇದೆ. ಸೆನ್ಸಾರ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತನಾಡುವೆ ಎಂದು ಹೇಳಿದರು.

ಈ ವೇಳೆ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ಚಿತ್ರದ ನಿರ್ದೇಶಕ ಶಂಕರ್‌ ಗುರು, ಸಹ ನಿರ್ಮಾಪಕ ಸತ್ಯ ರಾಯಲ್, ಆನಂದ್ ಆಡಿಯೋದ ಶ್ಯಾಮ್, ಸಂಗೀತ ನಿರ್ದೇಶಕ ವಾಸುಕಿ ವೈಭವ್, ನಟ ನಾಗಭೂಷಣ್, ಶಾಸಕಿ ನಯನಾ ಮೋಟಮ್ಮ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ‌

Be the first to comment

Leave a Reply

Your email address will not be published. Required fields are marked *

Translate »
error: Content is protected !!