ಗಮನ ಸೆಳೆದ ಅಣ್ಣಾತ್ತೆ ಮೋಷನ್ ಪೋಸ್ಟರ್

ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಸಿನಿಮಾದ ಫಸ್ಟ್‌ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಯುಟ್ಯೂಬ್‌ನಲ್ಲಿ ಮೋಷನ್‌ ಪೋಸ್ಟರ್‌ ಬಿಡುಗಡೆಯಾದ 24 ಗಂಟೆಗಳಲ್ಲಿ 19 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಗಮನ ಸೆಳೆದಿದೆ.

ಫಸ್ಟ್‌ಲುಕ್‌ ಪೋಸ್ಟರ್‌ನಲ್ಲಿ ರಜನಿಕಾಂತ್‌ ಬಿಳಿ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ರಜನಿಯ ಅವರ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಶಹಬ್ಬಾಸ್ ಎಂದಿದ್ದಾರೆ.

ಪೋಷನ್ ಪೋಸ್ಟರ್ ನಲ್ಲಿ ಬೈಕ್ ಜೊತೆ ರಜನಿಕಾಂತ್ ಕಾಣಿಸಿಕೊಂಡಿದ್ದು ಸದೃಢ ಮಧ್ಯ ವಯಸ್ಕನ ಪಾತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ.
ನವೆಂಬರ್ 4 ರಂದು ದೀಪಾವಳಿ ಹಬ್ಬದಂದು ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಚಿತ್ರವನ್ನು ಸನ್‌ ಪಿಕ್ಚರ್ಸ್‌ನ ಕಲಾನಿಧಿ ಮಾರನ್

ನಿರ್ಮಿಸುತ್ತಿದ್ದಾರೆ. ಶಿವ ನಿರ್ದೇಶಿಸುತ್ತಿದ್ದಾರೆ. ನಯನತಾರಾ, ಕೀರ್ತಿ ಸುರೇಶ್, ಖುಷ್ಬೂ, ಮೀನಾ, ಪ್ರಕಾಶ್ ರಾಜ್ ಸೇರಿದಂತೆ ಪ್ರಮುಖ ಕಲಾವಿದರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!