ಪುಟ್ಟಮಲ್ಲಿ

‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’ ಹಾಡು ರಿಲೀಸ್‌

‘ಡಾಲಿ’ ಧನಂಜಯ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’ ಹಾಡು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

ರೆಟ್ರೋ ಶೈಲಿ ಹಾಗೂ ಆಧುನಿಕ ಟ್ರೆಂಡ್‌ಗಳ ಅದ್ಭುತ ಸಮ್ಮಿಲನವಾಗಿರುವ ‘ಪುಟ್ಟಮಲ್ಲಿ’ ಹಾಡು ಇನ್‌ಸ್ಟಾಗ್ರಾಮ್ ರೀಲ್ಸ್, ಯೂಟ್ಯೂಬ್ ಶಾರ್ಟ್ಸ್ ಹಾಗೂ ಎಕ್ಸ್  ತಾಣಗಳಲ್ಲಿ #Puttamalli ಮತ್ತು #AnnaFromMexico ಹ್ಯಾಶ್‌ಟ್ಯಾಗ್‌ಗಳೊಂದಿಗೆ ಟ್ರೆಂಡ್ ಆಗುತ್ತಿದೆ.

ವಾಸೂಕಿ ವೈಭವ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸುಮಧುರ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ಹಾಡು   ಆಕರ್ಷಕವಾಗಿ ಹೊರಹೊಮ್ಮಿದೆ.

ಶಂಕರ್ ಗುರು ನಿರ್ದೇಶನದ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರವು ಸಾಹಸ, ಹಾಸ್ಯ ಹಾಗೂ ಸಂಪೂರ್ಣ ಕೌಟುಂಬಿಕ ಮನರಂಜನೆಯ ಅಂಶಗಳನ್ನು ಒಳಗೊಂಡಿದೆ. ಡಿಸೆಂಬರ್ 24ರಂದು ಚಿತ್ರವನ್ನು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

ಪುಟ್ಟಮಲ್ಲಿ

ದಿ ರಾಯಲ ಸ್ಟುಡಿಯೋಸ್ ಹಾಗೂ ಐರಾ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಚನ್ನರಾಜ್ ಬಿ. ಹಟ್ಟಿಹೊಳಿ, ಮೃಣಾಲ್, ಸತ್ಯ ರಾಯಲ ಮತ್ತು ಜಾನ್ವಿ ರಾಯಲ ಜಂಟಿಯಾಗಿ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದಾರೆ.

ಚಿತ್ರದಲ್ಲಿ ಧನಂಜಯ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಸಾಥ್ ನೀಡಿದ್ದು, ಉಮಾಶ್ರೀ, ರಂಗಾಯಣ ರಘು, ನಾಗಭೂಷಣ್, ಸಾಧು ಕೋಕಿಲ, ಪೂರ್ಣಚಂದ್ರ ಮೈಸೂರು,  ಹುಲಿ ಕಾರ್ತಿಕ್ ಪ್ರಮುಖ ತಾರಾಗಣದಲ್ಲಿದ್ದಾರೆ.

ಪುಟ್ಟಮಲ್ಲಿ

ಎ.ಜೆ. ಶೆಟ್ಟಿ ಮತ್ತು ಎಸ್.ಕೆ. ರಾವ್ ಛಾಯಾಗ್ರಹಣ, ಪ್ರಶಾಂತ್ ರಾಜಪ್ಪ ಸಂಭಾಷಣೆ ಹಾಗೂ ಅಜಯ್ ಕುಮಾರ್ ಮತ್ತು ನಿರಂಜನ್ ದೇವರಮನೆ ಅವರ ಸಂಕಲನ ಚಿತ್ರಕ್ಕಿದೆ.

ಪುಟ್ಟಮಲ್ಲಿ

Be the first to comment

Leave a Reply

Your email address will not be published. Required fields are marked *

Translate »
error: Content is protected !!