”ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?” ಎಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ಉದ್ಧಟತನ ಮೆರೆದಿದ್ದಾರೆ.
ಜಾತಿ ವ್ಯವಸ್ಥೆ ವಿರುದ್ದ ಹೋರಾಡಿದ ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿಭಾಯಿ ಫುಲೆ ಅವರ ಜೀವನವನ್ನಾಧರಿಸಿ ಹಿಂದಿಯಲ್ಲಿ ‘ಫುಲೆ’ ಚಿತ್ರ ನಿರ್ಮಾಣವಾಗಿದೆ. ರೋಹನ್ ಸಿಪ್ಪಿ ನಿರ್ದೇಶನದ ಈ ಚಿತ್ರದಲ್ಲಿ ಜಾತಿ ವ್ಯವಸ್ಥೆಯನ್ನು ಸೂಚಿಸುವ ಭಾಗಗಳನ್ನು ತೆಗೆದು ಹಾಕುವಂತೆ ಸೆನ್ಸಾರ್ ಮಂಡಳಿ ಸೂಚಿಸಿತ್ತು. ಇದರಿಂದ ಏ. 11ರಂದು ರಿಲೀಸ್ ಆಗಬೇಕಿದ್ದ ಚಿತ್ರದ ಬಿಡುಗಡೆ ಮುಂದೂಡಲಾಗಿದೆ. ಈ ಬಗ್ಗೆ ಕಿಡಿ ಕಾರಿದ ನಿರ್ದೇಶಕ ಅನುರಾಗ್ ಕಶ್ಯಪ್ ನಾಲಗೆ ಹರಿಬಿಟ್ಟಿದ್ದಾರೆ.
ತಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಸುವ ಅನುರಾಗ್ ಕಶ್ಯಪ್ ಮತ್ತೊಮ್ಮೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅನುರಾಗ್ ಕಶ್ಯಪ್ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನುರಾಗ್ ಕಶ್ಯಪ್ನನ್ನು ಬಂಧಿಸಿ ಎನ್ನುವ ಕೂಗು ಕೇಳಿ ಬಂದಿದೆ. ಜತೆಗೆ ಈ ಸಂಬಂಧ ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಾಗಿದೆ.

Be the first to comment