ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಈಗ ಕ್ರಿಕೆಟ್ ಜಗತ್ತಿನ ಕಥೆಯ ಮೂಲಕ ನಟನೆಗೆ ಕಮ್ ಬ್ಯಾಕ್ ಆಗುತ್ತಿದ್ದಾರೆ.
ಅನುಷ್ಕಾ ಶರ್ಮಾ ಅವರ ಮುಂದಿನ ಸಿನಿಮಾ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಜುಲನ್ ಗೋಸ್ವಾಮಿಯವರ ಜೀವನಾಧಾರಿತ ಕಥೆಯಾಗಿದೆ. ಚಿತ್ರಕ್ಕೆ ‘ಚಕ್ದಾ ಎಕ್ಸ್ ಪ್ರೆಸ್’ ಎಂದು ಹೆಸರು ಇಡಲಾಗಿದೆ.
ಹೊಸ ಚಿತ್ರದ ಟೀಸರ್ ನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, “ಅಷ್ಟೊಂದು ಪ್ರಾಧಾನ್ಯತೆ ಇಲ್ಲದ ಸಮಯದಲ್ಲಿ ಮಹಿಳಾ ಕ್ರಿಕೆಟ್ ತಂಡ ಪ್ರವೇಶಿಸಿ ಸಾಧನೆಗೈದ ಜುಲನ್ ಗೋಸ್ವಾಮಿಯವರ ರೂಪದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದೇನೆ “ಎಂದು ತಿಳಿಸಿದ್ದಾರೆ.
“ಭಾರತದಲ್ಲಿ ಮಹಿಳಾ ಕ್ರಿಕೆಟ್‍ನಲ್ಲಿ ಕ್ರಾಂತಿಯನ್ನುಂಟುಮಾಡಿದ್ದ ಜೂಲನ್ ಮತ್ತು ಅವರ ತಂಡಕ್ಕೆ ಅಭಿನಂದನೆ ಹೇಳಬೇಕು. ಈ ಪಾತ್ರದಲ್ಲಿ ಕಾಣಿಸಿಕೊಳ್ಳಲು ನನಗೆ ಹೆಮ್ಮೆಯಾಗುತ್ತಿದೆ” ಎಂದು ಅನುಷ್ಕಾ ಶರ್ಮಾ ಹೇಳಿದ್ದಾರೆ.
ಅನುಷ್ಕಾ ಶರ್ಮಾ ಅವರು 2018ರ ಝೀರೋ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಹಿಂದಿ ಚಿತ್ರರಂಗದಲ್ಲಿ ಬಯೋಪಿಕ್ ಗಳು ಹೆಚ್ಚಾಗಿ ಬರುತ್ತಿದ್ದು, ಈ ಚಿತ್ರ ಯಾವ ರೀತಿ ಯಶಸ್ಸು ಕಾಣುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
___

Be the first to comment