ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ”ಅಪಾಯವಿದೆ ಎಚ್ಚರಿಕೆ” ಚಿತ್ರತಂಡ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ”ಅಪಾಯವಿದೆ ಎಚ್ಚರಿಕೆ” ಚಿತ್ರತಂಡ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿ ನಿರೀಕ್ಷೆ ಹುಟ್ಟಿಸಿತ್ತು. ನಂತರ “ಬ್ಯಾಚುಲರ್ ಬದುಕು” ಅನ್ನುವ ಸಾಂಗ್ ಬಿಡುಗಡೆಗೊಳಿಸಿ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿತ್ತು.
ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಚಿತ್ರದ ಬಹುತೇಕ ಭಾಗವನ್ನು ಕತ್ತಲೆಯ ಕಾಡಲ್ಲಿ ಚಿತ್ರೀಕರಿಸಿದ್ದು, ನೋಡುಗನ ಗಮನ ಸೆಳೆಯುವಂತೆ ಮಾಡಿದ್ದಾರೆ. ಹೊಸ ತರಹದ ಚಿತ್ರಕಥೆಯುಳ್ಳ ಈ ಚಿತ್ರ ಮೇಕಿಂಗ್, ಮ್ಯೂಸಿಕ್, ಲೊಕೇಶನ್ ಮೂಲಕ ಸದ್ದು ಮಾಡುತ್ತಿದೆ. ವಿ. ಜಿ ಮಂಜುನಾಥ್ ಮತ್ತು ಪೂರ್ಣಿಮ ಎಂ ಗೌಡ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ವಿಭಾಗದಲ್ಲಿ ಸುನಾದ್ ಗೌತಮ್ ಕೆಲಸ ಮಾಡಿದ್ದಾರೆ.
“ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ”ಅಮೃತಧಾರೆ” ಖ್ಯಾತಿಯ ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
“ಅಪಾಯವಿದೆ ಎಚ್ಚರಿಕೆ” ಚಿತ್ರ ಇದೇ ಫೆಬ್ರವರಿ 7ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.
—-
Be the first to comment