ಗೀತಪ್ರಿಯ ಸುರೇಶ್ ಕುಮಾರ್ ಅಭಿನಯಿಸಿದ ‘ಅಪರಿಚಿತೆ’ ಚಿತ್ರದ ಟ್ರೇಲರ್ ರಿಲೀಸ್ ಸಮಾರಂಭ ಅದ್ದೂರಿಯಾಗಿ ನೆರವೇರಿತು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ, ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಾರಾ “ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದರು.
‘ಈ ಹಿಂದೆ “ತಾಯವ್ವ” ಎಂಬ ಚಿತ್ರದಲ್ಲಿ ನಟಿಸಿದ್ದೆ. ಈಗ “ಅಪರಿಚಿತೆ” ಚಿತ್ರದಲ್ಲಿ ಅಭಿನಯಿಸಿದ್ದೇನೆ. ನನ್ನ ಪತಿ ಸುರೇಶ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾನು ಜವಾಬ್ದಾರಿಯುತ ಶಿಕ್ಷಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ವಿಶ್ವನಾಥ್ ಕಥೆ ಹೇಳಿದರು. ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ನೀಡುವ ಕಥೆ ಇದ್ದರೆ ಮಾತ್ರ ನಟನೆ ಮಾಡುವುದಾಗಿ ಹೇಳಿದ್ದೆ. ರಾಮನಗರದಲ್ಲಿ ಚಿತ್ರೀಕರಣ ನಡೆದಿದೆ. ಕ್ರಿಸ್ ಮಸ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ’ ಎಂದರು ಗೀತಪ್ರಿಯ.
‘ಇದು ನೈಜ ಕಥೆ ಆಧಾರಿತ ಸಿನಿಮಾ. ಈಗಾಗಲೇ ಚಿತ್ರ ಸೆನ್ಸರ್ ಅಂಗಳದಲ್ಲಿದೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್.ಜೆ. ನಿಖಿತಾ, ಹಿರಿಯ ನಟ ಶ್ರೀನಾಥ್ ಹಾಗೂ ಶ್ರೀನಾಥ್ ಅವರ ಮಗ ರೋಹಿತ್ ಪ್ರಮುಖ ಪಾತ್ರ ಮಾಡಿದ್ದಾರೆ’ ಎಂದರು ನಿರ್ದೇಶಕ ವಿಶ್ವನಾಥ್.
‘ಒಂದೊಳ್ಳೆ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ. ನಾನು ಹಾಗೂ ನನ್ನ ಮಗ ರೋಹಿತ್ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ’ ಎಂದರು ಹಿರಿಯ ನಟ ಶ್ರೀನಾಥ್.
ನಿರ್ಮಾಪಕ ಸುರೇಶ್ ಕುಮಾರ್ ಉಪಸ್ಥಿತರಿದ್ದರು.
—–





Be the first to comment