ಆರಂಭದಿಂದಲೂ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನರ ಮನಸ್ಸನ್ನು ತಲುಪಿರುವ ”ಅಪಾಯವಿದೆ ಎಚ್ಚರಿಕೆ” ಚಿತ್ರ ಈ ವಾರ(ಫೆಬ್ರವರಿ 28) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ತುಂಬಾ ದಿನಗಳ ಬಳಿಕ ಕನ್ನಡಲ್ಲಿ ಈ ರೀತಿಯ ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಸಿನಿಮಾವನ್ನು ಬರೆದು, ನಿರ್ದೇಶಸಿರುವ ಅಭಿಜಿತ್ ತೀರ್ಥಹಳ್ಳಿ, ಚಿತ್ರದ ಬಹುತೇಕ ಭಾಗವನ್ನು ಕತ್ತಲೆಯ ಕಾಡಲ್ಲಿ ಚಿತ್ರೀಕರಿಸಿದ್ದು, ನೋಡುಗನ ಗಮನ ಸೆಳೆಯುವಂತೆ ಮಾಡಿದ್ದಾರೆ.
ವಿ. ಜಿ ಮಂಜುನಾಥ್ ಮತ್ತು ಪೂರ್ಣಿಮ ಎಂ ಗೌಡ ನಿರ್ಮಾಣದ ಈ ಚಿತ್ರಕ್ಕೆ ಸಂಗೀತ, ಛಾಯಾಗ್ರಹಣ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ ಸುನಾದ್ ಗೌತಮ್.
“ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, ”ಅಮೃತಧಾರೆ” ಖ್ಯಾತಿಯ ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Be the first to comment