ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ತಿರುಗಿಬಿದ್ದ ಬೆನ್ನಲ್ಲೇ ರಕ್ಷಕ್ ಕ್ಷಮೆಯಾಚಿಸಿದ್ದಾರೆ.
ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ಮುಂದೆ ಆಚಾತುರ್ಯ ನಡೆಯೋದಿಲ್ಲ ಎಂದು ರಕ್ಷಕ್ ಮನವಿ ಮಾಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ರಕ್ಷಕ್ ಬುಲೆಟ್ ಪೋಸ್ಟ್ ಮಾಡಿ , ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಒಂದು ಸ್ಕಿಟ್‌ನಲ್ಲಿ ಹೇಳಿದ್ದೆ. ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು ನನ್ನ ತಾಯಿ ಹಾಗೂ ಕುಟುಂಬಸ್ಥರು ಪರಮ ಭಕ್ತರು. ನಮ್ಮ ತಂದೆಯವರು ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ.
ನಾವು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಆರಂಭಿಸುತ್ತೇನೆ. ನಾನು ಭಕ್ತಾಧಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವುಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ಕ್ಷಮೆ ಕೋರಿದ್ದಾರೆ.
ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಬುಲೆಟ್ ಅವಹೇಳನಕಾರಿಯಾಗಿ ಮಾತನಾಡಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
—-

Be the first to comment