‘ಕಾಂತಾರ’ ಸಿನಿಮಾದ ದೈವ ಸಂಪ್ರದಾಯ ಕುರಿತು ನೀಡಿದ್ದ ಹೇಳಿಕೆಯಿಂದ ವಿವಾದಕ್ಕೀಡಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಕ್ಷಮೆ ಕೋರಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ರಣವೀರ್ ಸಿಂಗ್ ನೀಡಿದ್ದ ಹೇಳಿಕೆ ದೈವದ ಅವಹೇಳನವಾಗಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು.ಈ ವಿಚಾರವಾಗಿ ಹಿರಿಯ ವಕೀಲ ಪ್ರಶಾಂತ್ ಮೆತಲ್ ಕಾನೂನು ಹೋರಾಟ ಆರಂಭಿಸಿ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕ್ರಮ ಕೈಗೊಂಡಿದ್ದರು. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.
ಹಲವು ಒತ್ತಡಗಳು ಬಂದಿದ್ದರೂ ಪ್ರಶಾಂತ್ ಮೆತಲ್ ಕಾನೂನು ಹೋರಾಟದಿಂದ ಹಿಂದೆ ಸರಿಯದೆ, ಚಾಮುಂಡೇಶ್ವರಿ ದೇವಿಯ ಎದುರು ನಟ ರಣವೀರ್ ಸಿಂಗ್ ಕ್ಷಮೆ ಕೇಳಿದರೆ ಪ್ರಕರಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ.
ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ್ದಾರೆ. ರಣವೀರ್ ಸಿಂಗ್ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ತೆರೆದಿದೆ





Be the first to comment