ಗಾಯಕಿ ಮಂಗ್ಲಿ ಕ್ಷಮೆಯಾಚನೆ

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡಿನ  ಹಿಂದಿ ಆವೃತ್ತಿಯನ್ನು ಹಾಡಿದ್ದ ಗಾಯಕಿ ಮಂಗ್ಲಿ  ಕ್ಷಮೆಯಾಚಿಸಿದ್ದಾರೆ.

ಧ್ರುವ ಸರ್ಜಾ ಅಭಿನಯದ ‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಅರಿಯದೆ ನಡೆದು ಹೋದ ಈ ತಪ್ಪಿಗೆ ತಾವು ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.

ಯಾರಿಗೂ ನೋವು ಮಾಡುವ ಉದ್ದೇಶ ತಮಗಿರಲಿಲ್.  ಹಾಡಿನ ಸಾಹಿತ್ಯವನ್ನು ತಿದ್ದಲಾಗಿದ್ದು, ಶೀಘ್ರದಲ್ಲೇ ಪರಿಷ್ಕೃತ ಆವೃತ್ತಿಯನ್ನು ಬಿಡುಗಡೆ ಮಾಡಲಾಗುವುದು. ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಿ ಈ ಹಾಡನ್ನು ಎಲ್ಲಾ ಡಿಜಿಟಲ್ ವೇದಿಕೆಗಳಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು  ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಬೆಂಬಲಕ್ಕೆ ನಿಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಚಿತ್ರತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಸರ್ಸೆ ಸರ್ಸೆ’ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ಹಿಂದಿ ಆವೃತ್ತಿಯ ಹಾಡನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರ  ಈ ಹಾಡಿನ ಕುರಿತು  ಸೆನ್ಸಾರ್ ಮಂಡಳಿ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!