‘ರಾಮನ ಅವತಾರ’ ನಿಷೇಧಿಸಲು ಆಗ್ರಹ

ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿರುವ ‘ರಾಮನ ಅವತಾರ’ ಚಿತ್ರ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ. 

ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥಕ್ಕೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿʼರಾಮನ ಅವತಾರ’ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಕರ್ನಾಟಕ ಚಲನಚಿತ್ರ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಅವರಿಗೆ ಹಿಂದು ಜನಜಾಗೃತಿ ಸಮಿತಿಯ ಶರತ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ಚಿತ್ರನಟ ‘ರಾಮನ’ ಹೆಸರಿನಲ್ಲಿ ಚುನಾವಣೆಗೆ ನಿಂತಿರುತ್ತಾನೆ. ಅಲ್ಲಿ ‘ಯಾರ ಮನೆ ಮುಂದೆ ಕಸ ಇದ್ದರೆ ರಾಮನಿಗೆ ಕಾಲ್ ಮಾಡಿ’ ಎಂದು ಕರೆ ನೀಡಲಾಗುತ್ತದೆ. ಇನ್ನು ಚಿತ್ರ ನಾಯಕಿ ರಾಮಾಯಣದಂತೆ ರಾಮನನ್ನು ಜಿಂಕೆಯ ಚಿತ್ರವಿರುವ ಕಾರಿನ ಹಿಂದೆ ಓಡಿಸಿ ನಂತರ ಅವಳನ್ನು ಕಿಡ್ನ್ಯಾಪ್ ಮಾಡುತ್ತಿರುವಂತೆ ತೋರಿಸಲಾಗಿದೆ.  ರಾಮನ ವೇಷದಲ್ಲಿ ಚಿತ್ರದ ನಾಯಕ ಖಳನಾಯಕರೊಂದಿಗೆ ಫೈಟಿಂಗ್ ಮಾಡುತ್ತಿರುವಂತೆ ತೋರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’  ಕನ್ನಡ ಚಲನಚಿತ್ರ ಮೇ 10 ಕ್ಕೆ ಬಿಡುಗಡೆಗೊಳ್ಳಲಿದೆ.  ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಕೋಟ್ಯಂತರ ಹಿಂದುಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಸಿನಿಮಾದ ಹೆಸರನ್ನು ಬದಲಾಯಿಸಬೇಕು.  ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದು ಹಾಕಬೇಕೆಂದು ಹಿಂದು ಜನಜಾಗೃತಿ ಸಮಿತಿ ಒತ್ತಾಯಿಸಿದೆ. 

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!