ʻಮುದುಡಿದ ಎಲೆಗಳುʼ ಚಿತ್ರದಲ್ಲಿ ಬಾಲಿವುಡ್ ನಟಿ

ಬಾಲಿವುಡ್ ನಟಿ ಅಪ್ಸರ ರಾಣಿ ಇದೇ ಮೊದಲ ಬಾರಿಗೆ ʻಮುದುಡಿದ ಎಲೆಗಳುʼ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ.

ಹಿಂದಿ ಹಾಗೂ ತೆಲುಗು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ,  ರಾಮ್ ಗೋಪಾಲ್ ವರ್ಮ ಅವರ ʻಡೇಂಜರಸ್ʼ ಚಿತ್ರದ ಮೂಲಕ ಜನಪ್ರಿಯರಾಗಿರುವ  ಅಪ್ಸರ ರಾಣಿ ಎಂ.ಶಂಕರ್ ನಿರ್ದೇಶನ ಹಾಗೂ ನಿರ್ಮಾಣದ ʻಮುದುಡಿದ ಎಲೆಗಳುʼ ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಪ್ಸರ ರಾಣಿ  ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು. ದುಬಾರಿ ಕಾರೊಂದರಲ್ಲಿ ಕಾಲೇಜ್ ಗೆ ಕಾಲಿಟ್ಟ ಹುಡುಗಿಯ ಸೌಂದರ್ಯ ಹಾಗೂ ಸ್ಟೈಲ್ ಗೆ ಕಾಲೇಜು ಹುಡುಗರು ಮಾರು ಹೋಗುತ್ತಾರೆ. ಹೊಸದಾಗಿ ಕಾಲೇಜು ಸೇರಿರುವ ಹುಡುಗಿ ಇರಬಹುದು ಎಂದು ಹುಡುಗರು ಆಲೋಚಿಸುತ್ತಿದ್ದಾಗ ಅವರು ಕಾಲೇಜು ಸೇರಲು ಬಂದಿರುವ ಹುಡುಗಿಯಲ್ಲ‌. ಕೆಮಿಸ್ಟ್ರಿ ಟೀಚರ್ ಅಂತ ಗೊತ್ತಾಗುತ್ತದೆ. ಇದನ್ನು ನಿರ್ದೇಶಕರು ಹಾಡಿನ ಮೂಲಕ ತೋರಿಸಿದ್ದಾರೆ. ಭಜರಂಗಿ ಮೋಹನ್ ನೃತ್ಯ ಸಂಯೋಜಿಸಿದ ಈ ಹಾಡಿನಲ್ಲಿ ಅಪ್ಸರ ರಾಣಿ, ರಂಜಿತ್ ಕುಮಾರ್ ಹಾಗೂ ಪಂಕಜ್ ನಾರಾಯಣ್ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೊಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ.

ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯದರ್ಶನ್, ಪ್ರೀತಿ ತಾರಾಬಳಗದಲ್ಲಿದ್ದಾರೆ. ಅಪ್ಸರ ರಾಣಿ, ಹರ್ಷಿಕಾ ಪೂಣಚ್ಛ, ರಮೇಶ್ ಭಟ್, ಭವ್ಯ, ಶೋಭ್ ರಾಜ್, ಶಂಕರ್ ಅಶ್ವತ್ಥ್, ಪೂನಂ ಪಾಂಡೆ, ಪದ್ಮಾ ವಾಸಂತಿ, ಜೋಸೈಮನ್  ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಿಯೋ ಪ್ರೊಡಕ್ಷನ್ ಫಿಲಂ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ಎಂ ಶಂಕರ್ , ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ರಂಜನಿ ಈ ಚಿತ್ರದ ಸಹ ನಿರ್ಮಾಪಕಿ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ನಿರ್ದೇಶನ,  ಶ್ಯಾಮ್ ಸಿಂಧನೂರು ಅವರ ಛಾಯಾಗ್ರಹಣವಿದೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!