“ಅರಸಯ್ಯನ ಪ್ರೇಮಪ್ರಸಂಗ”ದ ಹಾಡು ರಿಲೀಸ್

“ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರದ ಹಾಡು ರಿಲೀಸ್ ಆಗಿದೆ.

ಕೃಷ್ಣ ರಿತ್ತಿ ಬರೆದಿರುವ “ಅಯ್ಯಯ್ಯೋ ರಾಮ” ಚಿತ್ರದ ಹಾಡು ಬಿಡುಗಡೆಯಾಗಿದೆ. ಹಾಡಿಗೆ ಪ್ರವೀಣ್ – ಪ್ರದೀಪ್ ಸಂಗೀತ ನೀಡಿದ್ದಾರೆ‌. ಶಂಕರ್ ಭಾರತಿಪುರ ಹಾಡಿದ್ದಾರೆ. ಗ್ರಾಮೀಣ ಸೊಗಡಿನ ಈ ಹಾಡು A2 Music ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ.

ಈ ಹಾಡನ್ನು ನಟ ನವೀನ್ ಶಂಕರ್ ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಿಡುಗಡೆ ಮಾಡಿ ಶುಭ ಕೋರಿದರು. ಬಳಿಕ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ದೇಶಕ ಜೆ.ವಿ.ಆರ್ ದೀಪು, ನಾನು ಅಭಿನಯ ತರಂಗದಲ್ಲಿ ನಟನೆ ಹಾಗೂ ನಿರ್ದೇಶನದ ತರಬೇತಿ ಪಡೆದಿದ್ದೇನೆ. ನಿರ್ಮಾಪಕ ರಾಜೇಶ್ ಸಹ ಅಭಿನಯ ತರಂಗದ ವಿದ್ಯಾರ್ಥಿಯಾಗಿದ್ದರು. ಈ ಚಿತ್ರದ ಕಥೆ ಮೆಚ್ಚಿ ನಿರ್ಮಾಣಕ್ಕೆ ಮುಂದಾದರು. ಈ ಚಿತ್ರ ಕಾಮಿಡಿ ಡ್ರಾಮ ಎನ್ನಬಹುದು ಎಂದರು.

ಹಾಡಿನ ಬಗ್ಗೆ ಹೇಳಬೇಕಾದರೆ ಹಳ್ಳಿಗಳಲ್ಲಿ ಯಾರಾದರೂ ಸತ್ತಾಗ ರಾತ್ರಿ ಸಮಯದಲ್ಲಿ ಭಜನೆ ಮಾಡುತ್ತಾರೆ. ಆ ರೀತಿ ನಮ್ಮ ಚಿತ್ರದಲ್ಲೂ ಬರುವ ಒಂದು ಪ್ರಸಂಗದಲ್ಲಿ ಈ ಹಾಡು ಬರುತ್ತದೆ. ಈ ಹಾಡು ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು.

ನಾನು ಕೂಡ ಅಭಿನಯ ತರಂಗದ ವಿದ್ಯಾರ್ಥಿ. ನಿರ್ದೇಶಕ ದೀಪು ಈ ಕಥೆ ಹೇಳಿದಾಗ, ಗ್ರಾಮೀಣ ಸೊಗಡಿನ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ನನ್ನ ಪತ್ನಿ ಮೇಘಶ್ರೀ ರಾಜೇಶ್ ಈ ಚಿತ್ರದ ನಿರ್ಮಾಪಕಿ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ಮಾಪಕ ರಾಜೇಶ್ ಹೇಳಿದರು.

ನಾನು ನಾಯಕ ಎಂದು ಯಾವತ್ತೂ ಕರೆಸಿಕೊಳ್ಳಲು ಇಷ್ಟಪಡುವುದಿಲ್ಲ. ಪೋಷಕ ನಟನಾಗಿರುವುದಕ್ಕೆ ಇಷ್ಟ ಪಡುತ್ತೇನೆ. ನಿರ್ಮಾಪಕರು, ನಿರ್ದೇಶಕರು ನೀನೇ ಈ ಚಿತ್ರದ ನಾಯಕ ಎಂದಾಗ ಆಶ್ಚರ್ಯವಾಯಿತು. ದೀಪು ಹಳ್ಳಿಸೊಗಡಿನ ಅದ್ಭುತ ಕಥೆ ಆಯ್ಕೆ ಮಾಡಿಕೊಂಡು ಚೆನ್ನಾಗಿ ಚಿತ್ರ ಮಾಡಿದ್ದಾರೆ. ಚಿತ್ರ ಕೂಡ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ನಟ ಮಹಾಂತೇಶ್ ಹಿರೇಮಠ್ ತಿಳಿಸಿದರು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರವೀಣ್ – ಪ್ರದೀಪ್ ಮಾಹಿತಿ ನೀಡಿದರು. ಗಾಯಕ ಶಂಕರ್ ಭಾರತಿಪುರ ಗಾಯನದ ಬಗ್ಗೆ ಮಾತನಾಡಿದರು.

ನಾಯಕಿ ರಶ್ಮಿತಾ ಗೌಡ, ವಿಜಯ್ ಚೆಂಡೂರ್, ರಘು ರಾಮನಕೊಪ್ಪ, ಪಿ.ಡಿ.ಸತೀಶ್ ಸೇರಿದಂತೆ ಅನೇಕ ಕಲಾವಿದರು, ಛಾಯಾಗ್ರಾಹಕ ಗುರುಪ್ರಸಾದ್ ನರ್ನಾಡ್, ಸಂಕಲನಕಾರ ಸುನೀಲ್ ಕಶ್ಯಪ್ ಮುಂತಾದ ತಂತ್ರಜ್ಞರು ಚಿತ್ರದ ಬಗ್ಗೆ ಮಾತನಾಡಿದರು.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!