ದಿವ್ಯಾ ಜೊತೆ ಅರವಿಂದ್ ಸ್ಕ್ರೀನ್ ಶೇರ್

‘ಅರ್ಧಂಬರ್ಧ ಪ್ರೇಮ ಕಥೆ’ಯಲ್ಲಿ ಬಿಗ್ ಬಾಸ್ ಜೋಡಿ ದಿವ್ಯಾ ಉರುಡುಗ ಮತ್ತು ಅರವಿಂದ್ ಕೆ.ಪಿ ಬಣ್ಣ ಹಚ್ಚಿದ್ದಾರೆ.

ಈ ಇಬ್ಬರ ಜೋಡಿಯನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಾ ಇದ್ದಾರೆ. ಬಿಗ್ ಬಾಸ್ ಸೀಸನ್ 8 ರ ಟಾಪ್ 5 ಸ್ಪರ್ಧಿಗಳಲ್ಲಿ ಇವರು ಇದ್ದರು. ಬಿಗ್ ಬಾಸ್‍ಗೆ ಹೋದಾಗಿನಿಂದ ದಿವ್ಯಾ ಉರುಡುಗ ಹೆಚ್ಚು ಜನ ಪ್ರಿಯತೆಯನ್ನು ಹೊಂದಿದ್ದಾರೆ.

‘ಅರ್ಧಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ ಪೋಸ್ಟರ್ ನ್ನು ಅರವಿಂದ್ ಕೆ.ಪಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಹುಚ್ಚು ಮನಸ ಹುಡುಗ, ಹುಚ್ಚು ಮನಸ ಹುಡುಗಿ, ಹುಚ್ಚು ಹಿಡಿದ ವಿಷಯ, ಹುಚ್ಚು ಹಿಡಿದ ಹೃದಯ, ಹೀಗೊಂದು ವರದಿ, ಇದು ಪ್ರಯಾಣದ ಸರದಿ’ ಎಂದು ದಿವ್ಯಾ ಜೊತೆ ಇರೋ ಫೋಟೋದ ಜೊತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ ಅರವಿಂದ್.

ಕಿರುತೆರೆಯಲ್ಲಿ ಕೆಲವು ಸೀರಿಯಲ್‍ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ’ ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಸಿದರು.

ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ ಶಾಲಾದಿನಗಳಲ್ಲಿ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದರು. ಶಿಕ್ಷಣಕ್ಕಾಗಿ ಮಂಗಳೂರಿನಲ್ಲಿದ್ದಾಗ ಇವರಿಗೆ ಕಿರುತೆರೆಯಲ್ಲಿ ನಟಿಸಿಲು ಆಫರ್ ಬಂತು. ಚಿಟ್ಟೆ ಹೆಜ್ಜೆ, ಅಂಬಾರಿ, ಖುಷಿ, ಓಂ ಶಕ್ತಿ ಓಂ ಶಾಂತಿ ಸೀರಿಯಲ್‍ಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೆ ಪರಿಚಿತರಾದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!