ಹಾಲಿವುಡ್ ನಟ ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅರೆಸ್ಟ್

ಹಾಲಿವುಡ್ ಸ್ಟಾರ್ ನಟ ಅರ್ನಾಲ್ಡ್ ಶ್ವಾರ್ಜಿನೆಗ್ಗರ್  ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದುಬಾರಿ ವಾಚ್ ಧರಿಸಿದ್ದ ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ವಾಚ್ ಆದಾಯ ಮೂಲದ ಬಗ್ಗೆ ಘೋಷಣೆ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು  ಮ್ಯೂನಿಚ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ಅರ್ನಾಲ್ಡ್ ಶ್ವಾರ್ಜಿನೆಗ್ಗರ್  ಅವರಿಗೆ ಪ್ರಯಾಣ ಮುಂದುವರಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಆದರೆ ವಾಚ್ ಆದಾಯ ಮೂಲದ ಬಗ್ಗೆ ಅಧಿಕೃತ ಘೋಷಣೆ ಮಾಡುವವರೆಗೂ ವಾಚ್ ಕಸ್ಟಮ್ಸ್ ಅಧಿಕಾರಿಗಳ ವಶದಲ್ಲೇ ಇರುತ್ತದೆ ಎಂದು ಹೇಳಲಾಗಿದೆ.

76 ವರ್ಷದ ಹಿರಿಯ ನಟ ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅಮೆರಿಕದ ಕ್ಯಾಲಿಫೋರ್ನಿಯಾ ಗವರ್ನರ್ ಆಗಿ ಆಯ್ಕೆಯಾಗಿದ್ದರು.

——-

Be the first to comment

Leave a Reply

Your email address will not be published. Required fields are marked *

Translate »
error: Content is protected !!