ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ(92) ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಆಶಾ ಭೋಸ್ಲೆ ಅವರು ಅವರು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ವೈದ್ಯರ ಶ್ರಮದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವಯೋಸಹಜ ಸಮಸ್ಯೆಗಳಿಂದ ಆಶಾ ಭೋಸ್ಲೆ ಬಳಲುತ್ತಿದ್ದರು.
ಆಶಾ ಭೋಸ್ಲೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರು ತಮ್ಮ ವಿಶಿಷ್ಟ ಧ್ವನಿಯಿಂದ ಹಲವು ತಲೆಮಾರುಗಳ ಹೃದಯ ಗೆದ್ದಿದ್ದರು.
ಆಶಾ ಭೋಸ್ಲೆಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.
ಆಶಾ ಭೋಸ್ಲೆ ಅವರ ಅಗಲಿಕೆ ಶೋಕದ ವಾತಾವರಣವನ್ನುಂಟು ಮಾಡಿದೆ.
—-





Be the first to comment