“ಅಥಿ ಐ ಲವ್ ಯು’ ಸಿನಿಮಾ ಡಿಸೆಂಬರ್ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದವಾಗುತ್ತಿದೆ. ಈಗಾಗಲೇ “ಅಥಿ’ ಸಿನಿಮಾದ ಟ್ರೇಲರ್ಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈಗ ಸೆನ್ಸಾರ್ ನಿಂದ ಚಿತ್ರಕ್ಕೆ “ಯು’ ಪ್ರಮಾಣ ಪತ್ರ ಸಿಕ್ಕಿದೆ. ಸೆವೆನ್ ರಾಜ್ ಈ ಚಿತ್ರದ ನಿರ್ಮಾಪಕರು.
ಲೋಕೇಂದ್ರ ಸೂರ್ಯ ಮತ್ತು ಸಾತ್ವಿಕಾರಾವ್ ಅಭಿನಯದ ಸಿನಿಮಾ ಅಥಿ ಹಾಗೂ ವಸಂತ್ ಎಂಬ ಎರಡು ಪಾತ್ರಗಳ ಸುತ್ತ ನಡೆಯುತ್ತದೆ. ಇದು ಒಂದ ದಿನ, ಒಂದೇ ಮನೆಯಲ್ಲಿ ನಡೆಯುವ ಕಥೆ. ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಗಂಡ ದಿನ ರಾತ್ರಿ ವಾಪಸು ಬರುತ್ತಾನೆ. ಒಂದು ದಿನ ಇದಕ್ಕಿದಂತೆ ಗಂಡ ಮಧ್ಯಾಹ್ನ ಮನೆಗೆ ಬಂದಾಗ ಮನೆಯಲ್ಲಿ ಹೆಂಡತಿ ಏನು ಮಾಡುತ್ತಿರುತ್ತಾಳೆ? ಎಂಬುದನ್ನು ತೆರೆಯ ಮೇಲೆ ನೋಡಬೇಕು.
ನಮ್ಮ ಸಿನಿಮಾವನ್ನು ಮದುವೆಯಾದ ದಂಪತಿಗಳು ಹಾಗೂ ಪ್ರೀತಿ ಮಾಡುತ್ತಿರುವವರು ನೋಡಿ. ಸಿನಿಮಾದಲ್ಲಿ ಸಮಾಜಕ್ಕೆ ಒಂದೊಳ್ಳೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಇಡೀ ಸಿನಿಮಾದಲ್ಲಿ ಎರಡೇ ಪಾತ್ರಗಳು ಮಾತ್ರ ನಿಮಗೆ ತೆರೆಯ ಮೇಲೆ ಕಾಣುವುದು. ಉಳಿದ ಪಾತ್ರಗಳು ಧ್ವನಿಯ ಮೂಲಕ ಸಿನಿಮಾಕ್ಕೆ ಜೀವ ತುಂಬಿದೆ’ ಎಂಬುದು ಕಥಾಹಂದರದ ಬಗ್ಗೆ ಲೋಕೇಂದ್ರ ಸೂರ್ಯ ನೀಡುವ ವಿವರಣೆ.
Be the first to comment