ಅಥಿಯಾ ಶೆಟ್ಟಿ – ರಾಹುಲ್ ಮದುವೆ ಫಿಕ್ಸ್

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ನಟಿ ಅಥಿಯಾ ಶೆಟ್ಟಿ ಮತ್ತು ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರ ಮದುವೆ ದಿನಾಂಕ ಫಿಕ್ಸ್ ಆಗಿದೆ ಎನ್ನಲಾಗಿದೆ.

ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ 2023 ರ ಜನವರಿ ಕೊನೆಗೆ ಮದುವೆಯಾಗುತ್ತಾರೆ ಎನ್ನುವ ಸುದ್ದಿ ತಿಳಿದು ಬಂದಿದೆ.

ಜನವರಿ 21 ರಿಂದ 23 ರವರೆಗೆ ಈ ಜೋಡಿಯ ಮದುವೆ ಕಾರ್ಯಕ್ರಮ ನಡೆಯಲಿದೆ. ಮದುವೆ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಮದುವೆ ಕಾರ್ಯಕ್ರಮ ತುಂಬಾ ಗ್ರ್ಯಾಂಡ್ ಆಗಿ ನಡೆಯಲಿದೆ ಎಂದು ತಿಳಿದು ಬಂದಿದೆ. ಹಳದಿ ಶಾಸ್ತ್ರ, ಮೆಹೆಂದಿ, ಸಂಗೀತ ಕಾರ್ಯಕ್ರಮ ನಡೆಯಲಿವೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಕಳೆದ ಹಲವು ದಿನಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದು, ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ತಮ್ಮ ರೊಮ್ಯಾಂಟಿಕ್ ಫೋಟೋಗಳನ್ನು ನಿರಂತರವಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಅಥಿಯಾ ಶೆಟ್ಟಿ ಮತ್ತು ರಾಹುಲ್ ಕಳೆದ ವರ್ಷ ತಮ್ಮ ಪ್ರೀತಿ ಬಗೆಗಿನ ಗುಟ್ಟನ್ನು ಬಹಿರಂಗ ಮಾಡಿದ್ದರು. ಇವರಿಬ್ಬರು ಸಿನಿಮ ಕಾರ್ಯಕ್ರಮ, ಪಾರ್ಟಿ, ಟ್ರಿಪ್ ಹೀಗೆ ಹಲವಾರು ಕಡೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!