avathar2 ಉತ್ತಮ ಗಳಿಕೆ ಮಾಡಿದ ಅವತಾರ್-2

ಜೇಮ್ಸ್ ಕ್ಯಾಮರೂನ್ ಅವರ ಅವತಾರ್-2 ಸಿನಿಮಾ ಭಾರತದಲ್ಲೂ ಮೊದಲ ದಿನ ಉತ್ತಮ ಗಳಿಕೆ ಮಾಡಿದೆ.

ಸಿನಿಮಾ ಪಂಡಿತರ ಲೆಕ್ಕಾಚಾರದ ಪ್ರಕಾರ ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್-2 ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ 38.50 ಕೋಟಿ ರೂಪಾಯಿಂದ 40.50 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಮೂಲಕ ಅವತಾರ್ 2 ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿ ಹೆಚ್ಚು ಓಪನಿಂಗ್ ಮಾಡಿದ ಹಾಲಿವುಡ್ ಸಿನಿಮಾವಾಗಿದೆ.

2019ರಲ್ಲಿ ಬಂದ Avengers: Endgame ಆಗಿದೆ. ಅವೆಂಜರ್ಸ್ ಸಿನಿಮಾ ಮೊದಲ ದಿನ ಭಾರತದಲ್ಲಿ 53.10 ಕೋಟಿ ರೂಪಾಯಿ ಗಳಿಕೆ ಮಾಡಿತ್ತು.

ಅವತಾರ್-2 ಭಾರತದ ಅನೇಕ ಭಾಷೆಯಲ್ಲಿ ರಿಲೀಸ್ ಆಗಿದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ಡಬ್ ಆಗಿ ತೆರೆಗೆ ಬಂದಿದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಕರ್ನಾಟಕ ಸೇರಿದಂತೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಭಾರತದಲ್ಲೇ ಅವತಾರ್-2 ಸಿನಿಮಾ ಬರೋಬ್ಬರಿ 22 ಕೋಟಿ ರೂಪಾಯಿ ಬಾಚಿಕೊಂಡಿದೆ. ಉತ್ತರ, ಪೂರ್ವ ಹಾಗೂ ಪಶ್ಚಿಮ ಭಾರತದಲ್ಲೂ ಭರ್ಜರಿ ಗಳಿಕೆ ಮಾಡಿದೆ.

ಅವತಾರ್-2 ಸಿನಿಮಾ ಹಾಲಿವುಡ್‌ನ ಸ್ಪೈಡರ್ ಮ್ಯಾನ್; ನೋ ವೇ ಹೋಮ್, ಡಾಕ್ಟರ್ ಸ್ಟ್ರೇಂಜ್; ಮಲ್ಟಿವರ್ಸ್ ಆಫ್ ಮ್ಯಾಡ್‌ನೆಸ್ ಮತ್ತು ಅವೆಂಜರ್ಸ್: ಇನ್ಫಿನಿಟಿ ವಾರ್‌ ಸಿನಿಮಾಗಳ ಕಲೆಕ್ಷನ್ ಬ್ರೇಕ್ ಮಾಡಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!