ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್ ಶೆಟ್ಟಿ ಅವರು ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಫೆ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್ ಶೆಟ್ಟಿ ತಾಜ್ ಲ್ಯಾಂಡ್ ಎಂಡ್ ಹೋಟೆಲ್’ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಕರಾವಳಿ ಭಾಗದ ಸಂಸ್ಕೃತಿ ಅನಾವರಣ ಮಾಡಿದ ಕಾಂತಾರ ಚಿತ್ರ ಸೂಪರ್ ಹಿಟ್ ಎನಿಸಿತು. ಮುಖ್ಯ ಪಾತ್ರದಲ್ಲಿ ನಟಿಸಿದ್ದ ರಿಷಬ್ ಶೆಟ್ಟಿ ದೈವದ ಪಾತ್ರ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು.
___

Be the first to comment