ಭಿನ್ನ ಕಂಟೆಂಟಿನ ಚಿತ್ರ ‘ಬ್ಯಾಕ್ ಬೆಂಚರ್ಸ್’ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ನಿರ್ದೇಶಕರು ಕೂಡ ರಾಜಶೇಖರ್. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜಶೇಖರ್, ”ನಾನು ಸಾಕಷ್ಟು ಸೋಲು ನೋಡಿದ್ದೇನೆ. ನನಗೆ ಸೋಲು ಹೊಸತಲ್ಲ. ಈ ಚಿತ್ರ ಈ ಹುಡುಗರಿಗಾಗಿ ಗೆಲ್ಲಬೇಕು. ಏಕೆಂದರೆ, ಈ ಹುಡುಗರು ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮೀಸಲಿಟ್ಟಿದ್ದಾರೆ. ಬರೀ ನಟನೆ ಅಷ್ಟೇ ಅಲ್ಲ, ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಅವರಿಗಾದರೂ ಗೆಲ್ಲಲೇಬೇಕು” ಎಂದರು.
”ಈ ಚಿತ್ರ ರಂಜನೆ ಮತ್ತು ವಿನೋದಕ್ಕಾಗಿಯಷ್ಟೇ ಅಲ್ಲ. ಇದರಲ್ಲಿ ಹದಿಹರೆಯದವರ ತವಕ ಮತ್ತು ತಾಕಲಾಟಗಳನ್ನು ಕಟ್ಟಿಕೊಡಲಾಗಿದೆ. ಇವತ್ತಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ವ್ಯವಸ್ಥೆ ಇದೆಲ್ಲದರ ಕುರಿತಾದ ಕಥೆ ಇದು. ರಾಜಶೇಖರ್ ನನ್ನ ಸಹಪಾಠಿ. ಈ ಚಿತ್ರವನ್ನು ಕೇವಲ ಅವರಿಗಾಗಿ ಮಾಡಿದ್ದೇನೆ. ಈ ಹುಡುಗರು ಕನಿಷ್ಠ ಮೂರು ವರ್ಷಗಳಿಂದ ಈ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಸುಲಭವಾಗಿ ತಯಾರಾದ ಚಿತ್ರವಲ್ಲ” ಎಂದು ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.
Be the first to comment