ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಬಂಧಿತ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಮತ್ತು ಪೆಟ್ರೋಲ್ ಬಂಕ್ ಮ್ಯಾನೇಜರ್ ಸೇರಿದ್ದಾರೆ.
ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ಗಳು ಹಾಗೂ ಮೆಸೇಜ್ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ವಿಜಯಲಕ್ಷ್ಮೀ ದೂರು ದಾಖಲಿಸಿದ ಬೆನ್ನಲ್ಲೇ ಆರೋಪಿಗಳು ತಾವು ಮಾಡಿದ ಅಶ್ಲೀಲ ಪೋಸ್ಟ್ಗಳನ್ನು ಡಿಲೀಟ್ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಐಪಿ ಅಡ್ರೆಸ್ ಆಧಾರದಲ್ಲಿ ಆರೋಪಿಗಳ ಮೂಲ ಪತ್ತೆ ಹಚ್ಚಿದ್ದಾರೆ.
ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದ ಪ್ರಕರಣದ ತನಿಖೆ ಕೊನೇ ಹಂತಕ್ಕೆ ಬಂದಿದೆ. ಅಶ್ಲೀಲ ಕಾಮೆಂಟ್ ಮಾಡಿದ್ದ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ವಿಜಯಲಕ್ಷ್ಮೀ ಪ್ರಕರಣದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲಎಂದು ಇತ್ತೀಚೆಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಪೊಲೀಸರು ಕಾರ್ಯಪ್ರವೃತ್ತರಾಗಿ 2 ಆರೋಪಿಗಳನ್ನು ಬಂಧಿಸಿದ್ದರು.
—-





Be the first to comment