ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಏಳು ಮಂದಿಯ ಜಾಮೀನು ರದ್ದು ಮಾಡಿ ಸುಪ್ರೀ ಕೋರ್ಟ್ ಆದೇಶ ನೀಡಿದೆ. ಇದರಿಂದ ದರ್ಶನ್ ಗ್ಯಾಂಗ್ ಗೆ ಜೈಲು ಫಿಕ್ಸ್ ಆಗಿದೆ.
ಕರ್ನಾಟಕ ಹೈಕೋರ್ಟ್ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ತೀರ್ಪುನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. ಸುಪ್ರೀಂ ಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಜಾಮೀನು ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ದರ್ಶನ್ ಗ್ಯಾಂಗ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.
ನಟ ದರ್ಶನ್ ನ್ನು ತಕ್ಷಣವೇ ಅರೆಸ್ಟ್ ಮಾಡಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಉಳಿದ ಆರೋಪಿಗಳು ತಕ್ಷಣವೇ ಕೋರ್ಟ್ಗೆ ಸರೆಂಡರ್ ಆಗಬೇಕಿದೆ.
ದರ್ಶನ್ ಜೊತೆ ಪವಿತ್ರಾ ಗೌಡ, ಜಗದೀಶ್ ಅಲಿಯಾಸ್ ಜಗ್ಗ, ಅನುಕುಮಾರ್ ಅಲಿಯಾಸ್ ಅನು, ಪ್ರದೂಶ್, ನಾಗರಾಜು ಅಲಿಯಾಸ್ ನಾಗ, ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.
‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್ನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂ ಕೋರ್ಟ್ ಹೇಳಿದೆ.
ದರ್ಶನ್ ಸೇರಿ 7ಮಂದಿಯ ಜಾಮೀನು ರದ್ದುಪಡಿಸುವಂತೆ ಕೋರಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಜುಲೈ 24 ರಂದು ನ್ಯಾ. ಜೆ.ಬಿ ಪರ್ದಿವಾಲಾ ಮತ್ತು ನ್ಯಾ. ಆರ್ ಮಹದೇವನ್ ಪೀಠ ವಿಚಾರಣೆ ನಡೆಸಿ ಹೈಕೋರ್ಟ್ ಜಾಮೀನು ನೀಡಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿತ್ತು. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡುವಾಗ ಸೂಕ್ತ ಮಾನದಂಡಗಳನ್ನು ಅನುಸರಿಸಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು.





Be the first to comment