ವರಮಹಾಲಕ್ಷ್ಮಿ ಹಬ್ಬಕ್ಕೆ ‘ಬೇಲ್’ ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ‘ಬೇಲ್’ ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ  ಪ್ರೇಕ್ಷಕರ ಎದುರು ಬರಲಿದೆ.

ಕೆವಿಎನ್ ನಿರ್ಮಾಣ ಮಾಡುತ್ತಿರುವ ಬಹು ನಿರೀಕ್ಷಿತ ‘ಬೇಲ್’  ಚಿತ್ರತಂಡ ಶಿವರಾಜ್ ಕುಮಾರ್ ಅವರ  ಸಿನಿಮಾದ ಫಸ್ಟ್ ಲುಕ್ ನ್ನು‌ ಅನಾವರಣ ಮಾಡಿದೆ. ಬೇಲ್ ಸಿನಿಮಾದಲ್ಲಿ ಶಿವಣ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಲ್ಟ್ ಅಂಡ್ ಪೆಪ್ಪರ್ ಲುಕ್ ನಲ್ಲಿ ದರ್ಶನ ಕೊಟ್ಟಿರುವ ಶಿವಣ್ಣ , ವಿಜಿ ಎಂಬ ಪಾತ್ರವನ್ನು ಪ್ಲೇ ಮಾಡುತ್ತಿದ್ದಾರೆ.

ಕೊಡೆ ಹಿಡಿದು ಸಾಕು ನಾಯಿಯ ಜೊತೆ ಶಿವಣ್ಣ ನಡೆದು ಬರುವ ಸ್ಟೈಲ್   ಕಿಕ್ ಕೊಡ್ತಿದೆ. ರಾತ್ರಿ ಜೋರು ಮಳೆಯಲ್ಲಿ ಬೆಂಗಳೂರು ಚಿತ್ರಣ. ನಿಧಾನವಾಗಿ ನಾಯಿಗೆ ಬಿಸ್ಕೆಟ್ ತಿನ್ನುಸುತ್ತಿರುವ ವಿಜಿ‌ ಪರಿಚಯ ಮಾಡಿಸುತ್ತಾರೆ. ಫೋನ್ ಕರೆ ಸ್ವೀಕರಿಸುವ ವಿಜಿಗೆ ಅತ್ತ ಕಡೆಯಿಂದ ಬಹುಪರಾಕ್ ಶುರುವಾಗುತ್ತದೆ.

‘ನೀನು ಹಚ್ಚಿರುವ ಬೆಂಕಿ ಬರೀ ಊರನ್ನು ಅಲ್ಲ, ದೇಶವನ್ನು ಸುಡುತ್ತಿದೆ’ ಎಂದು ಅತ್ತ ಕಡೆಯಿಂದ ಧ್ವನಿ ಕೇಳುತ್ತದೆ. ‘ಇದನ್ನೆಲ್ಲಾ ಮಾಡಿ ಹೇಗೆ ಸೈಲೆಂಟ್ ಇದ್ದೀಯಾ?’ ಎಂದಾಗ “ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವ ಯಾವಾಗ್ಲೂ ಆಗಲ್ಲ” ಎಂದು ಡೈಲಾಗ್ ಹೊಡೆದಿದ್ದಾರೆ ಶಿವಣ್ಣ. ಶಿವಣ್ಣ ಹಾಗೂ ಸಾಯಿ ಕುಮಾರ್ ಡೈಲಾಗ್ ಜುಗಲ್ ಬಂದಿಯಂತೂ ಸಿನಿಮಾ ಮೇಲಿನ ಥ್ರಿಲ್ ಹೆಚ್ಚು ಮಾಡಿದೆ.

ಪವನ್ ಒಡೆಯರ್ ಸತ್ಯಘಟನೆಗಳನ್ನು ಆಧರಿಸಿ  ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.  ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವೈದ್ಯ ಛಾಯಾಗ್ರಹಣ, ಗುಣ ಪ್ರೊಡಕ್ಷನ್ ಡಿಸೈನ್ ಹಾಗೂ ಶಶಾಂಕ್ ನಾರಾಯಣ್ ಸಂಕಲನ, ಕೆವಿಎನ್ ಸಂಸ್ಥೆಯ ವೆಂಕಟ್ ನಾರಾಯಣ್ ಬಂಡವಾಳ  ‘ಬೇಲ್’ ಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!