ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು”. ಡಿಸೆಂಬರ್ 3 ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ. ಹಾಗಾಗಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಇದು 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಆ ಕಾಲಮಾನದ ಗೆಟಪ್ ನಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ. ಟೈಗರ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
“ಅಟ್ಟಕತ್ತಿ”, ” ಕಾಲ”, “ಕಬಾಲಿ”, “ಭೈರವ”, “ದಸರಾ”, “ಕಲ್ಕಿ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ. ಈಗಾಗಲೇ ಸಂಗೀತ ನಿರ್ದೇಶನಕ್ಕೆ ಸಂಬಂಧಿಸಿದ ಕೆಲಸಗಳು ಆರಂಭವಾಗಿದೆ.
ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.
Be the first to comment