ಬನಾರಸ್ ಪ್ರಿ ರಿಲೀಸ್ ಕಾರ್ಯಕ್ರಮ

ಝೈದ್‌ ಖಾನ್ ನಟನೆಯ ಬನಾರಸ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

ಹುಬ್ಬಳಿಯಲ್ಲಿ ನಡೆದ ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಪ್ರಮುಖರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಝೈದ್ ಖಾನ್, ‘ಇಂದು ನನ್ನ ಜೀವನದಲ್ಲಿ ತುಂಬಾ ದೊಡ್ಡ ದಿನ. ನನ್ನ ಜೀವನದ ಇಬ್ಬರು ದೊಡ್ಡ ಶಕ್ತಿಗಳು ಇಲ್ಲಿ ಬಂದಿದ್ದಾರೆ. ನನಗೆ ಅಣ್ಣನ ಸಮಾನರಾದ ದರ್ಶನ್ ಹಾಗೂ ನನ್ನಪ್ಪ ಇದೇ ಮೊದಲ ಬಾರಿಗೆ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅಪ್ಪ ತಲೆತಗ್ಗಿಸುವ ಕೆಲಸ ಎಂದೂ ಮಾಡಲ್ಲ. ಇವತ್ತು ನಾನಿಲ್ಲಿ ನಿಂತಿದ್ದೇನೆ ಎಂದರೆ ಅದಕ್ಕೆ ನನ್ನಪ್ಪನೇ ಕಾರಣ ಎಂದರು.

ದರ್ಶನ್ ನನಗೆ ಮೊದಲಿಂದಲೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಬನಾರಸ್ ಚಿತ್ರತುಂಬಾನೇ ವಿಶೇಷವಾಗಿದೆ. ಚಿತ್ರಕ್ಕಾಗಿ ನಾನು ತುಂಬಾ ಕಷ್ಟಪಟ್ಟಿದ್ದೇನೆ. ಜಯತೀರ್ಥ ಅವರು ಒಂದು ಅದ್ಭುತ ಚಿತ್ರವನ್ನು ನನಗಾಗಿ ಮಾಡಿ ಕೊಟ್ಟಿದ್ದಾರೆ. ನ.4ರಂದು ಚಿತ್ರ ದೇಶಾದ್ಯಂತ ಬಿಡುಗಡೆಯಾಗುತ್ತಿದ್ದು, ಸಿನಿಮಾ ಜನರ ಮನಸನ್ನು ಗೆದ್ದೇಗೆಲ್ಲುತ್ತೆ ಎಂಬ ಭರವಸೆಯಿದೆ. ಚಿತ್ರ ನೋಡಿ ಹರಸಿ’ ಎಂದು ಝೈದ್ ಖಾನ್ ಕೇಳಿಕೊಂಡರು.

ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹೀಗೆ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತಯಾರಾಗಿರುವ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ತಿಲಕ್‌ರಾಜ್ ಬಲ್ಲಾಳ್ ಅವರು ಚಿತ್ರ ನಿರ್ಮಾಣ ಮಾಡಿದ್ದಾರೆ.

ಸೋನಲ್ ಮೊಂತೇರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!