ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮಗ ಝಾಯೆದ್ ಖಾನ್ ನಟನೆಯ ಬನಾರಸ್ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಚಿತ್ರ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ನವೆಂಬರ್ 4 ರಂದು ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ.
ಜಯತೀರ್ಥ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಸೋನಲ್ ಖಾನ್ ನಾಯಕಿಯಾಗಿ ಅಭಿನಯಿಸಿದ್ದಾರೆ.
ಈ ಚಿತ್ರವು ಕನ್ನಡ, ತಮಿಳು, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ತಿಲಕ್ ರಾಜ್ ಬಲ್ಲಾಳ್ ಚಿತ್ರದ ನಿರ್ಮಾಪಕರಾಗಿದ್ದಾರೆ.
ವಿಶ್ವಾಸಾರ್ಹ ಮೂಲಗಳ ಪ್ರಕಾರ ಚಿತ್ರದ ಆಡಿಯೋ ಹಕ್ಕುಗಳು 3.5 ಕೋಟಿ ರೂ.ಗಳಿಗೆ ಮಾರಾಟವಾಗಿದೆ. ಇದು ಸ್ಯಾಂಡಲ್ ವುಡ್ ಮಟ್ಟಿಗೆ ದಾಖಲೆಯಾಗಿದೆ ಎಂದು ಹೇಳಲಾಗಿದೆ.
_____

Be the first to comment