ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯಿಸಿರುವ ʻಬನಾರಸ್ʼ ಪ್ಯಾನ್ ಇಂಡಿಯಾ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ.
ಟ್ರೈಲರ್ನಲ್ಲಿ ಮಾಸ್ ಡೈಲಾಗ್ಗಳು ಹೈಲೆಟ್ಸ್ ಆಗಿವೆ. ಚಿತ್ರ ಥ್ರಿಲ್ಲರ್ ಕಥೆಯನ್ನು ಹೊಂದಿದೆ ಎನ್ನುವ ಮಾಹಿತಿಯನ್ನು ಟೈಲರ್ ಮೂಲಕ ಚಿತ್ರತಂಡ ನೀಡಿದೆ.
ʻಒಲವೇ ಮಂದಾರʼ ಸಿನಿಮಾದ ನಿರ್ದೇಶಕ ಜಯತೀರ್ಥ ಈ ಸಿನಿಮಾಗೆ ಆಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಜಯತೀರ್ಥ ನಿರ್ದೇಶನದ ʻಬೆಲ್ ಬಾಟಮ್ʼ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಜಯತೀರ್ಥ ಬನಾರಸ್ ಸಿನಿಮಾ ಮೂಲಕ ಗಮನ ಸೆಳೆಯಲು ಸಜ್ಜಾಗಿದ್ದಾರೆ.
ಈ ಸಿನಿಮಾದಲ್ಲಿ ಸೋನಲ್ ಮೊಂಥೆರೋ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಹಾಡುಗಳು ಈಗಾಗಲೇ ಗಮನ ಸೆಳೆದಿವೆ.
ಸಿನಿಮಾ ಟ್ರೈಲರ್ ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದೆ. ನವೆಂಬರ್ 4ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.
___

Be the first to comment