ಬನಾರಸ್ ಚಿತ್ರದ ಬೆಳಕಿನ ಕವಿತೆ ಶೀರ್ಷಿಕೆಯ ವೀಡಿಯೋ ಸಾಂಗ್, ಅ.22ರ ಸಂಜೆ 6.30ಕ್ಕೆ ಬಿಡುಗಡೆಗೊಳ್ಳಲಿದೆ.
ಝೈದ್ ಖಾನ್ ನಾಯಕನಾಗಿ ನಟಿಸಿರುವ ಈ ಚಿತ್ರದ ಹಾಡುಗಳು ಜನಪ್ರಿಯ ಆಗಿವೆ. ಮಾಯಗಂಗೆ ಎಂಬ ಹಾಡು ಕ್ರೇಜ್ ಸೃಷ್ಟಿಸಿದೆ. ಬನಾರಸ್ ಹಾಡುಗಳು ಸೂಪರ್ ಹಿಟ್ ಆಗುತ್ತಿರೋದರಲ್ಲಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಪಾತ್ರ ದೊಡ್ಡದಿದೆ.
ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಬನಾರಸ್ ಟ್ರೈಲರ್ ಮೂಲಕ ಗಮನ ಸೆಳೆದಿದೆ. ಚಿತ್ರವನ್ನು ತಿಲಕ್ ರಾಜ್ ಬಲ್ಲಾಳ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಚಿತ್ರ ಕನ್ನಡ ಸೇರಿದಂತೆ ಮಲಯಾಳಂ ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ರಿಲೀಸ್ ಆಗಲಿದೆ.
ಚಿತ್ರದಲ್ಲಿ ನಾಯಕನಾಗಿ ಝೈದ್ ಖಾನ್, ನಾಯಕಿಯಾಗಿ ಸೋನಲ್ ಮೊಂತೆರಿಯೋ ನಟಿಸಿದ್ದಾರೆ. ಚಿತ್ರದಲ್ಲಿ ಸುಜಯ್ ಶಾಸ್ತ್ರಿ, ದೇವರಾಜ್, ಅಚ್ಯುತ್ ಕುಮಾರ್, ಸ್ವಪ್ನಾ ಮುಂತಾದವರು ನಟಿಸಿದ್ದಾರೆ.
ಬನಾರಸ್ ಗೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಇದೆ. ಇದೇ ನವೆಂಬರ್ 4 ರಂದು ಚಿತ್ರ ಬಿಡುಗಡೆ ಆಗಲಿದೆ.
___

Be the first to comment