ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ಹುತಾತ್ಮ ಪಿ.ಎಸ್.ಐ ಮಲ್ಲಿಕಾರ್ಜುನ ಬಂಡೆ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಈ ನೈಜಘಟನೆ ಆಧಾರಿತ ಚಿತ್ರಕ್ಕೆ “ಬಂಡೆ ಸಾಹೇಬ್” ಎಂದು ಹೆಸರಿಡಲಾಗಿದೆ.
ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಚಿನ್ಮಯ್ ರಾಮ್ ನಿರ್ದೇಶಿಸಿದ್ದಾರೆ. “ಕುರುಕ್ಷೇತ್ರ”, ” ದಿ ವಿಲನ್” ಸೇರಿದಂತೆ ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ಚಿನ್ಮಯ್ ರಾಮ್ ಅವರಿಗೆ “ಬಂಡೆ ಸಾಹೇಬ್” ಮೊದಲ ನಿರ್ದೇಶನದ ಚಿತ್ರವಾಗಿದೆ.
“ಕೃಷ್ಣ ರುಕ್ಮಿಣಿ” ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿ, “ಟೋನಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿನಯಿಸಿರುವ ಸಂತೋಷ್ ರಾಮ್ ಚಿತ್ರದ ನಾಯಕನಾಗಿ ಸಂತೋಷ್ ರಾಮ್ ನಟಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕಾವ್ಯ ಭಾರದ್ವಾಜ್ ಈ ಚಿತ್ರದ ನಾಯಕಿ. ವೀರಣ್ಣ ಕೊರಳ್ಳಿ, ಬಿರಾದಾರ್, ಸಿಂಬಾ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಗುಲ್ಬರ್ಗ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ನಾಲ್ಕು ಹಾಡುಗಳಿದೆ. ಸದ್ಯದಲ್ಲೇ ಹಾಡುಗಳ ಅನಾವರಣವಾಗಲಿದೆ.
ವೀರಣ್ಣ ಕೊರಳ್ಳಿ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂಜಾನೆ ಮಂಜು ಛಾಯಾಗ್ರಹಣ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.
—-

Be the first to comment