‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಡಿಸೆಂಬರ್‌ನಲ್ಲಿ ತೆರೆಗೆ

ದೀಕ್ಷಿತ್‌ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಜೋಡಿಯಾಗಿ ನಟಿಸಿರುವ ‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರ ಡಿಸೆಂಬರ್‌ನಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.

‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ದಂತಹ ಚಿತ್ರಗಳನ್ನು ನೀಡಿದ್ದ ನಿರ್ಮಾಪಕ ಎಚ್.ಕೆ ಪ್ರಕಾಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅಚ್ಯುತ್ ಕುಮಾರ್, ಸಾಧು ಕೋಕಿಲ, ಅಶ್ವಿನ್ ರಾವ್ ಪಲ್ಲಕ್ಕಿ ಮೊದಲಾದವರು ಚಿತ್ರದಲ್ಲಿದ್ದಾರೆ.‌

”‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಥ್ರಿಲ್ಲರ್‌ ಜಾನರ್‌ನ ಸಿನಿಮಾ. ಬ್ಯಾಂಕ್‌ ದರೋಡೆಗೆ ಸಂಬಂಧಿಸಿದ ಹಾಸ್ಯಮಯ ಕಥೆ ಇದೆ. ಚಿತ್ರೀಕರಣ ಮುಕ್ತಾಯಗೊಂಡಿದ್ದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಪ್ರಗತಿಯಲ್ಲಿದೆ. ಬೆಂಗಳೂರು, ತುಮಕೂರು ಸುತ್ತಮುತ್ತ 60 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವೆ. ಶೀಘ್ರದಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಆಲೋಚನೆಯಿದೆ’ ಎಂದು ನಿರ್ದೇಶಕ ಅಭಿಷೇಕ್‌ ಎಂ.  ಹೇಳಿದ್ದಾರೆ.

ಯುವಕರ ತಂಡವೊಂದು ವಿವಿಧ ಬ್ಯಾಂಕ್‌ಗಳನ್ನು ಲೂಟಿ ಮಾಡುವ ಹಾಸ್ಯಮಯ ಕಥೆ ಹೊಂದಿರುವ ‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರ ಪೋಸ್ಟರ್‌ನಿಂದಲೇ ಗಮನ ಸೆಳೆದಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ ಚಿತ್ರಕ್ಕಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!