ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ‘ಬೈರತಿ ರಣಗಲ್’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಲಿದ್ದಾರೆ.
ಇತ್ತೀಚೆಗಷ್ಟೇ ಬೈರತಿ ರಣಗಲ್ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ಅಪ್ಡೇಟ್ ಹಂಚಿಕೊಂಡಿದ್ದು, ಸಂಗೀತ ನಿರ್ದೇಶಕ ರವಿ ಬಸ್ರೂರು ಆಗಮನದ ಕುರಿತು ಚಿತ್ರ ತಂಡ ಮಾಹಿತಿ ನೀಡಿದೆ.
2017ರಲ್ಲಿ ಶ್ರೀಮುರಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ‘ಮಫ್ತಿ’ಸಿನಿಮಾದಲ್ಲಿ ಶಿವಣ್ಣ ನಿರ್ವಹಿಸಿದ್ದ `ಭೈರತಿ ರಣಗಲ್’ ಪಾತ್ರ ಸೂಪರ್ ಹಿಟ್ ಆಗಿತ್ತು. ಶಿವಣ್ಣನ ಪಾತ್ರ ಆ ಸಿನಿಮಾಕ್ಕೆ ಗೆಲ್ಲುವ ಶಕ್ತಿ ತಂದುಕೊಟ್ಟಿತ್ತು.
ಈಗ ಅದೇ ಪಾತ್ರವನ್ನು ಪ್ರಧಾನವಾಗಿರಿಸಿಕೊಂಡು ಸಿನಿಮಾ ತೆರೆಗೆ ಬರುತ್ತಿದೆ. ಭೈರತಿ ರಣಗಲ್ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದ್ದು, ಚಿತ್ರವನ್ನು ನರ್ತನ್ ನಿರ್ದೇಶನ ಮಾಡಲಿದ್ದಾರೆ.
ಶಿವರಾಜ್ ಕುಮಾರ್ ಅವರ ಹೋಂ ಬ್ಯಾನರ್ ಗೀತಾ ಪಿಕ್ಚರ್ಸ್ ಮೂಲಕ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮೊದಲ ಸಿನಿಮಾ `ವೇದ’ ಮೂಲಕ ಹಿಟ್ ನೀಡಿರುವ ನಿರ್ಮಾಪಕಿ ಗೀತಾ `ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಿಸುತ್ತಿದ್ದಾರೆ. ಸದ್ಯದಲ್ಲಿಯೇ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.
____

Be the first to comment